ಬೆಂಗಳೂರು: ಮುಖ್ಯಮಂತ್ರಿ ಅಧ್ಯಕ್ಷತೆಯ ಕರ್ನಾಟಕ ವನ್ಯಜೀವಿ ಮಂಡಳಿಯನ್ನು ಪುನರ್ ರಚನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಮುಂದಿನ ಮೂರು ವರ್ಷಗಳ ಅವಧಿಗೆ ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯನ್ನು ಪುನರ್ ರಚನೆ ಮಾಡಿ ಅರಣ್ಯ ಮತ್ತು ಪರಿಸರ ಇಲಾಖೆ ಆದೇಶಿಸಿದೆ.
ಮುಖ್ಯಮಂತ್ರಿ ಅಧ್ಯಕ್ಷತೆಯ ಮಂಡಳಿಗೆ ಶಾಸಕರಾದ ಅಶೋಕ ಎಂ. ಪಟ್ಟಣ, ಹೆಚ್.ಎಂ. ಗಣೇಶ್ ಪ್ರಸಾದ್, ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಅವರನ್ನು ಸರ್ಕಾರೇತರ ಸಂಸ್ಥೆಗಳಿಂದ ಸದಸ್ಯರಾಗಿ ನೇಮಕ ಮಾಡಲಾಗಿದೆ. ಸೌತ್ ಇಂಡಿಯಾ ವನ್ಯಜೀವಿ ಸಂಘದಿಂದ ಸುಶೀಲ ಗೈನಚಂದ್, ಟೈಗರ್ಸ್ ಅನ್ ಲಿಮಿಟೆಡ್ ವನ್ಯಜೀವಿ ಸಮಾಜದಿಂದ ಸೀಮಾ ಬೇಗಂ ಖಲೀಲ್, ಬೆಂಗಳೂರು ಪರಿಸರ ಟ್ರಸ್ಟ್ ನಿಂದ ಡಾ. ಆರ್.ವಿ. ದಿನೇಶ್ ಅವರನ್ನು ಸದಸ್ಯರಾಗಿ ನೇಮಕ ಮಾಡಲಾಗಿದೆ.
ಪರಿಸರ ತಜ್ಞರು, ಬಯಾಲಜಿಸ್ಟ್, ಪರಿಸರವಾದಿಗಳ ವಿಭಾಗದಿಂದ ಬೆಂಗಳೂರಿನ ರವೀಂದ್ರ ರಘುನಾಥ, ಡಾ. ರಾಜಕುಮಾರ್ ಮಲ್ಲಪ್ಪ ಅಂಗಡಿ, ವಿರಾಜಪೇಟೆಯಿಂದ ಸಂಕೇತ್ ಪೂವಯ್ಯ, ಧಾರವಾಡದ ವೈಶಾಲಿ ಕುಲಕರ್ಣಿ, ಬೀದರ್ ನ ವಿನಯಕುಮಾರ್ ಮಲ್ಲಿಗೆ, ಮೈಸೂರಿನ ಡಾ. ಸಂತೃಪ್ತ ಅವರನ್ನು ನೇಮಕ ಮಾಡಲಾಗಿದೆ.