HomeKarnatakaBIG NEWS: ಡೆಂಗ್ಯೂ ಜ್ವರಕ್ಕೆ ಮತ್ತೋರ್ವ ಬಾಲಕಿ ಬಲಿ

BIG NEWS: ಡೆಂಗ್ಯೂ ಜ್ವರಕ್ಕೆ ಮತ್ತೋರ್ವ ಬಾಲಕಿ ಬಲಿ

ಬೆಳಗಾವಿ: ರಾಜ್ಯದಲ್ಲಿ ಡೆಂಗ್ಯೂ ಮಹಾಮಾರಿ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಶಂಕಿತ ಡೆಂಗ್ಯೂ ಸೋಂಕಿಗೆ ಮತ್ತೋರ್ವ ಬಾಲಕಿ ಬಲಿಯಾಗಿದ್ದಾಳೆ.

ಧಾರವಾಡದ ಕುಂದಗೋಳದಲ್ಲಿ 5 ವರ್ಷದ ಬಾಲಕಿ ಡೆಂಗ್ಯೂ ಸೋಂಕಿನಿಂದ ಮೃತಪಟ್ಟ ಘಟನೆ ಬೆನ್ನಲ್ಲೇ ಬೆಳಗಾವಿಯಲ್ಲಿಯೂ ಇಂತದ್ದೇ ಘಟನೆ ಬೆಳಕಿಗೆ ಬಂದಿದೆ. ತೀವ್ರ ಜ್ವರದಿಂದ ಬಳಲುತ್ತಿದ್ದ 14 ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಶಂಕಿತ ಡೆಂಗ್ಯೂಗೆ ಬಲಿಯಾಗಿದ್ದಾಳೆ.

14 ವರ್ಷದ ಪ್ರಣಾಲಿ ಮೃತ ಬಾಲಕಿ. ಬೆಳಗಾವಿ ತಾಲೂಕಿನ ಹೊನಗಾ ಗ್ರಾಮದ ಬಾಲಕಿ ಪ್ರಣಾಲಿಗೆ ವಾಂತಿ-ಬೇದಿಯಾಗಿತ್ತು. ಬಳಿಕ ತೀವ್ರ ಜ್ವರ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular