HomeKarnatakaಶಿರೂರು ಗುಡ್ಡ ಕುಸಿತ ಪ್ರಕರಣ: ಗಂಗಾವಳಿ ನದಿಯಲ್ಲಿ ಎದೆ ಭಾಗಕ್ಕೆ ಕಲ್ಲು ಬಡಿದು ಮುಳುಗು ತಜ್ಞಗೆ...

ಶಿರೂರು ಗುಡ್ಡ ಕುಸಿತ ಪ್ರಕರಣ: ಗಂಗಾವಳಿ ನದಿಯಲ್ಲಿ ಎದೆ ಭಾಗಕ್ಕೆ ಕಲ್ಲು ಬಡಿದು ಮುಳುಗು ತಜ್ಞಗೆ ಗಂಭೀರ ಗಾಯ

ಕಾರವಾರ: ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೂಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾವಳಿ ನದಿಯಲ್ಲಿ ಶೋಧ ಕಾರ್ಯಾಚರಣೆ ವೇಳೆ ಮುಳುಗು ತಜ್ಞ ಗಾಯಗೊಂಡಿದ್ದಾರೆ.

ಕಲ್ಲು ಬಡಿದು ಮುಳುಗು ತಜ್ಞ ದೀಪು ಎದೆ ಭಾಗಕ್ಕೆ ಗಂಭೀರ ಗಾಯವಾಗಿದೆ. ಗಾಯಾಳು ದೀಪು ಅವರನ್ನು ಅಂಕೋಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಗಂಗಾವಳಿ ನದಿಯಲ್ಲಿ ಮುಳುಗಿರುವ ಟ್ರಕ್ ಮೇಲೆ ತರಲು ಪ್ರಯತ್ನ ನಡೆಸಲಾಗಿತ್ತು. ಮಲ್ಪೆಯಿಂದ ಆಗಮಿಸಿರುವ ಈಶ್ವರ ಮಲ್ಪೆ ಅವರ ಎಂಟು ಜನರ ತಂಡ ಕಾರ್ಯಾಚರಣೆ ನಡೆಸಿದ್ದು, ಈ ತಂಡದಲ್ಲಿದ್ದ ದೀಪು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular