HomeKarnatakaಗಮನಿಸಿ : IAS, KAS ಸ್ಫರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಗಮನಿಸಿ : IAS, KAS ಸ್ಫರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಡಿಜಿಟಲ್ ಡೆಸ್ಕ್ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ಸಮುದಾಯದವರಿಗೆ ಐಎಎಸ್ ಮತ್ತು ಕೆಎಎಸ್ ಸ್ಫರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ತಿಳಿಸಿದ್ದಾರೆ.

ಆಸಕ್ತ ಆಭ್ಯರ್ಥಿಗಳು ಸೇವಾಸಿಂಧು ಪೋರ್ಟಲ್ನ https://sevasindhuservices.karnataka.gov.in ಗೆ ಭೇಟಿ ನೀಡಿ ಆಗಸ್ಟ್ 31ರ ಒಳಗಾಗಿ ಅರ್ಜಿ ಸಲ್ಲಿಸಬೇಕು.ಅರ್ಜಿಯೊಂದಿಗೆ ಪೂರಕ ದಾಖಲೆಗಳನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸಬೇಕು. ಅಧಿಸೂಚನೆ ಮತ್ತು ವಿವರಗಳಿಗಾಗಿ ವೆಬ್ಸೈಟ್ http://dom.karnataka.gov.in ಗೆ ಭೇಟಿ ನೀಡಬಹುದು.

ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರು ನಗರದ ಹಜ್ ಭವನದಲ್ಲಿ 10 ತಿಂಗಳ ವಸತಿ ಸಹಿತ ತರಬೇತಿಯನ್ನು ನೀಡಲಾಗುವುದು.ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮAದಿರ ಹತ್ತಿರದ ಮೌಲನಾ ಅಜಾದ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಅಥವಾ ದೂ.08392-200125/224 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular