
ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ತಿಂಗಳಿನಿಂದ ಅಬ್ಬರಿಸುತ್ತಿರುವ ಮಳೆಯ ಪ್ರಮಾಣ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಮುಂದಿನ ಎರಡು ಮೂರು ದಿನಗಳಲ್ಲಿ ಮಳೆಯ ಪ್ರಮಾಣ ಇನ್ನಷ್ಟು ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಒಂದೆರಡು ದಿನಗಳಿಂದ ಮಳೆ ಪ್ರಮಾಣ ಕಡಿಮೆಯಾಗಿದೆ. ಮಂಗಳವಾರದಿಂದ ಮಳೆಯ ಪ್ರಮಾಣ ಮತ್ತಷ್ಟು ಕಡಿಮೆಯಾಗಾಗಿದೆ. ಜುಲೈ 29ರಂದು ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದಂತೆ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆ ಎಂದು ಹೇಳಲಾಗಿದೆ.