ಬೆಂಗಳೂರು: ಮೂಗಿನಲ್ಲಿ ಡಿಧೀರ್ ರಕ್ತಸ್ರಾವವಾಗಿ ಚಿಕಿತ್ಸೆ ಪಡೆದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅವರು ಆಸ್ಪತ್ರೆಗೆ ದಾಖಲಾದ ಮಾಹಿತಿ ತಿಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಶೀಘ್ರರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರಾದ ಸುದ್ದಿ ಮಾಧ್ಯಮಗಳಲ್ಲಿ ನೋಡಿದೆ. ಚಿಕಿತ್ಸೆ ಪಡೆಯುತ್ತಿರುವ ಕುಮಾರಸ್ವಾಮಿ ಅವರು ಶೀಘ್ರ ಚೇತರಿಸಿಕೊಂಡು ಮತ್ತೆ ತಮ್ಮ ಕರ್ತವ್ಯದಲ್ಲಿ ತೊಡಗಿಸಿಕೊಳ್ಳುವಂತಾಗಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ.