alex Certify ಸಿಎಂ ಬದಲಾವಣೆ ಚರ್ಚೆ ನಮ್ಮ ಮುಂದಿಲ್ಲ, ಸಿದ್ದರಾಮಯ್ಯನವರೇ 4 ವರ್ಷ ಮುಖ್ಯಮಂತ್ರಿ: ಸತೀಶ್ ಜಾರಕಿಹೊಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಎಂ ಬದಲಾವಣೆ ಚರ್ಚೆ ನಮ್ಮ ಮುಂದಿಲ್ಲ, ಸಿದ್ದರಾಮಯ್ಯನವರೇ 4 ವರ್ಷ ಮುಖ್ಯಮಂತ್ರಿ: ಸತೀಶ್ ಜಾರಕಿಹೊಳಿ

ಮಂಡ್ಯ: ಸಿದ್ದರಾಮಯ್ಯ ಅವರೇ ಮುಂದಿನ ನಾಲ್ಕು ವರ್ಷಗಳ ಕಾಲ ಮುಖ್ಯಮಂತ್ರಿ ಆಗಿ ಮುಂದುವರೆಯಲಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಮಂಡ್ಯದಲ್ಲಿ ಮಾತನಾಡಿದ ಅವರು, ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ನಮ್ಮ ಮುಂದಿಲ್ಲ. ಸಿದ್ಧರಾಮಯ್ಯನವರೇ ಮುಂದುವರೆಯಲಿದ್ದಾರೆ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಬದಲಾವಣೆ ಮಾಡುತ್ತೇವೆ ಎಂದವರು ಯಾರು? ಈಗ ಯಾರು ಚರ್ಚೆ ಮಾಡುತ್ತಿದ್ದಾರೆ. ಮುಂದೆ ಅವಕಾಶ ಸಿಕ್ಕರೆ ಮಾತನಾಡೋಣ. ಸದ್ಯಕ್ಕೆ ದಲಿತ ಮುಖ್ಯಮಂತ್ರಿ ಹುದ್ದೆ ವಿಚಾರ ಅಥವಾ ಸಿಎಂ ಬದಲಾವಣೆ ವಿಚಾರ ಇಲ್ಲ. ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ. ಬೇರೆ ಯಾವುದೇ ಕಾರಣಕ್ಕೂ ಬದಲಾವಣೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...