ಬೆಂಗಳೂರು: ಅತಿ ವೇಗದ ವಾಹನ ಸಂಚಾರಕ್ಕೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಮುಂದಾಗಿದೆ. ಆಗಸ್ಟ್ 1ರಿಂದ 130 ಕಿ.ಮೀ.ಗಿಂತ ಹೆಚ್ಚಿನ ವೇಗದಲ್ಲಿ ಸಂಚರಿಸುವ ವಾಹನಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗುವುದು.
ಸ್ಪಾಟ್ ಸ್ಪೀಡ್ ಮತ್ತು ಸೆಕ್ಷನಲ್ ಸ್ಪೀಡ್ ಆಧಾರದಲ್ಲಿ ವಾಹನ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿ ದಂಡ ವಿಧಿಸಲಾಗುವುದು. ರಾಜ್ಯಾದ್ಯಂತ 130 ಕಿ.ಮೀ.ಗಿಂತ ಹೆಚ್ಚಿನ ವೇಗದಲ್ಲಿ ವಾಹನ ಚಾಲನೆ ಮಾಡಿದಲ್ಲಿ ಎಫ್ಐಆರ್ ದಾಖಲಿಸಲಾಗುವುದು ಎಂದು ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ತಿಳಿಸಿದ್ದಾರೆ.
ಈ ರೀತಿಯ ಪ್ರಕರಣಗಳಲ್ಲಿ ಎರಡು ಸಾವಿರ ರೂಪಾಯಿವರೆಗೆ ದಂಡ ಅಥವಾ ಆರು ತಿಂಗಳು ಜೈಲು ಶಿಕ್ಷೆ ವಿಧಿಸಬಹುದಾಗಿದೆ. ವೇಗದ ಸಂಚಾರಕ್ಕೆ ಕಡಿವಾಣ ಹಾಕಲು ಈ ಕ್ರಮ ಕೈಗೊಳ್ಳಲಾಗುವುದು ಎಂದು ಅಲೋಕ್ ಕುಮಾರ್ ತಿಳಿಸಿದ್ದಾರೆ.