HomeKarnatakaವಿಚಾರಣೆ ನೆಪದಲ್ಲಿ ಪೊಲೀಸ್ ಠಾಣೆಯಲ್ಲಿ ಮಹಿಳೆ ಮೇಲೆ ಹಲ್ಲೆ ಆರೋಪ

ವಿಚಾರಣೆ ನೆಪದಲ್ಲಿ ಪೊಲೀಸ್ ಠಾಣೆಯಲ್ಲಿ ಮಹಿಳೆ ಮೇಲೆ ಹಲ್ಲೆ ಆರೋಪ

ಬೆಳಗಾವಿ: ವಿಚಾರಣೆ ನೆಪದಲ್ಲಿ ಪೊಲೀಸ್ ಠಾಣೆಯಲ್ಲಿ ಮಹಿಳೆಯ ಮೇಲೆ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಒಬ್ಬರು ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ.

ಚಿಕ್ಕೋಡಿ ತಾಲೂಕಿನ ಖಡಕಲಾಟ ಪೊಲೀಸ್ ಠಾಣೆಯ ಪಿಎಸ್ಐ ಅನಿತಾ ರಾಥೋಡ್ ಅವರು ಜುಲೈ 27ರಂದು ಠಾಣೆಗೆ ಕರೆಸಿಕೊಂಡು ಹಲ್ಲೆ ಮಾಡಿದ್ದಾರೆ ಎಂದು ಖಡಕಲಾಟ ಗ್ರಾಮದ ಪೂನಂ ಮಾಯಣ್ಣನವರ ಆರೋಪಿಸಿದ್ದಾರೆ.

ನಿಪ್ಪಾಣಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಪಕ್ಕದ ಮನೆಯ ಗೋಡೆ ಹಾಗೂ ನೀರಿನ ವಿಚಾರವಾಗಿ ಸಹೋದರನೊಂದಿಗೆ ಜಗಳವಾಗಿತ್ತು. ಜುಲೈ 26 ರಂದು ಪೊಲೀಸ್ ಠಾಣೆಯಲ್ಲಿ ದೂರು ಕೊಡಲು ಹೋದರೂ ಸ್ವೀಕರಿಸಲಿಲ್ಲ. ನಂತರ ಠಾಣೆಗೆ ಕರೆಸಿಕೊಂಡ ಪಿಎಸ್ಐ ಅನಿತಾ ಮಧ್ಯರಾತ್ರಿ 12 ಗಂಟೆಯವರೆಗೂ ಕೂರಿಸಿಕೊಂಡಿದ್ದರು. ಮಾರನೇ ದಿನವೂ ಠಾಣೆಗೆ ಕರೆಸಿ ಕಪಾಳಕ್ಕೆ, ಎದೆ, ಹೊಟ್ಟೆ ಭಾಗಕ್ಕೆ ಹೊಡೆದಿದ್ದಾರೆ. ಪ್ರಜ್ಞೆ ತಪ್ಪಿದ್ದ ನನ್ನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆಯ ನಂತರ ಚೇತರಿಸಿಕೊಂಡಿದ್ದೇನೆ ಎಂದು ಅವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಹಿಳೆಯ ಆರೋಪದ ಹಿನ್ನೆಲೆಯಲ್ಲಿ ಪಿಎಸ್ಐ ಅನಿತಾ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಮಹಿಳೆಗೆ ಕಪಾಳ ಮೋಕ್ಷ ಮಾಡಿರುವುದು ದೃಢಪಟ್ಟಿದೆ ಎಂದು ಎಸ್ಪಿ ಭೀಮಾಶಂಕರ ಗುಳೇದ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular