HomeKarnatakaಕರ್ನಾಟಕಕ್ಕೆ ಕೇಂದ್ರ ಕೊಟ್ಟಿದ್ದೇನು? ಘೋಷಣೆ ಮಾಡಿದ್ದ ಅನುದಾನವೂ ಇಲ್ಲ; ಇದು ಅನ್ಯಾಯವಲ್ಲದೇ ಇನ್ನೇನು? ಕಿಡಿ ಕಾರಿದ...

ಕರ್ನಾಟಕಕ್ಕೆ ಕೇಂದ್ರ ಕೊಟ್ಟಿದ್ದೇನು? ಘೋಷಣೆ ಮಾಡಿದ್ದ ಅನುದಾನವೂ ಇಲ್ಲ; ಇದು ಅನ್ಯಾಯವಲ್ಲದೇ ಇನ್ನೇನು? ಕಿಡಿ ಕಾರಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಏನನ್ನೂ ನೀಡದೇ ಅನ್ಯಾಯವಾಗಿಲ್ಲ ಎಂದು ಹೇಳಿದರೆ ಹೇಗೆ? ರಾಜ್ಯಕ್ಕೆ ಕೇಂದ್ರ ಕೊಟ್ಟಿರುವುದಾದರೂ ಏನು? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಡಿದ ಸಿಎಂ ಸಿದ್ದರಾಮಯ್ಯ, ಘೋಷಣೆ ಮಾಡಿದ್ದ ಅನುದಾನವನ್ನು ಕೂಡ ಕೇಂದ್ರ ಸರ್ಕಾರ ಕೊಟ್ಟಿಲ್ಲ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸುದ್ದಿಗೋಷ್ಠಿ ಕರೆದು ರಾಜ್ಯಕ್ಕೆ ಅನ್ಯಾಯವಾಗಿಲ್ಲ ಎಂದಿದ್ದಾರೆ. ಬಜೆಟ್ ಮೀಟಿಂಗ್ ಕರೆದಾಗ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂಪಾಯಿಗಳನ್ನೂ ನೀಡುವುದಾಗಿ ಘೋಷಣೆ ಮಾಡಿದ್ದು, ಅದನ್ನು ಕೊಡಿ ಎಂದು ಕೋರಿದ್ದೆವು. ಈ ಬಾರಿಯ ಬಜೆಟ್ ನಲ್ಲಿ ಈ ಬಗ್ಗೆ ಪ್ರಸ್ತಾಪವಿಲ್ಲ. 15 ನೇ ಹಣಕಾಸು ಆಯೋಗವು ಶಿಫಾರಸ್ಸು ಮಾಡಿದ್ದ 5495 ಕೋಟಿಗಳ ವಿಶೇಷ ಅನುದಾನವನ್ನೂ ಕೊಟ್ಟಿಲ್ಲ. ಪೇರಿಫೇರಲ್ ರಿಂಗ್ ರೋಡ್ ಗೆ 3000ಕೋಟಿ ಕೊಡುವುದಾಗಿ ಹೇಳಿದ್ದರು.ಅದೂ ಇಲ್ಲ. 3000 ಕೋಟಿ ಕೆರೆಗಳ ಅಭಿವೃದ್ಧಿಗೆ ಕೊಡುವುದಾಗಿ ಹೇಳಿದ್ದರು. ಅದೂ ಕೂಡ ಬಜೆಟ್ ನಲ್ಲಿ ಇಲ್ಲ. ಇದು ಅನ್ಯಾಯವಲ್ಲವೇ? ಆಂಧ್ರ, ಬಿಹಾರ ರಾಜ್ಯಗಳಿಗೆ ಕೊಟ್ಟಿದ್ದಾರೆ. ಕರ್ನಾಟಕಕ್ಕೆ ಏನು ಕೊಟ್ಟಿದ್ದಾರೆ ಎಂದು ಕೇಳಿದರು.

ಕೇಂದ್ರ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಘೋಷಣೆ ಮಾಡಿದ ಅನುದಾನವನ್ನು ನಾವು ಕೂಡಿಸುತ್ತೇವೆ ಎಂದು ಪ್ರಸ್ತಾಪ ಮಾಡಬಹುದಿತ್ತು. ಕೇಂದ್ರ ಸಚಿವರ ಕ್ಷೇತ್ರ ರಾಮನಗರಕ್ಕೂ ಏನಾದರೂ ಹೊಸದು ಯೋಜನೆ ಬಂದಿದೆಯೇ? ಕೈಗಾರಿಕಾ ಕಾರಿಡಾರ್ ಬಂದಿದೆಯೇ? ಮೇಕೆದಾಟು, ಕೈಗಾರಿಕೆ ಹಾಗೂ ಕೇಳಿದ ಅನುದಾನ ಕೊಟ್ಟಿಲ್ಲ. ರಾಯಚೂರಿಗೆ ಏಮ್ಸ್ ಸ್ಥಾಪಿಸುವಂತೆ ಕೋರಿದ್ದೆವು. ಆದರೆ ಯಾವುದೇ ಪ್ರಸ್ತಾಪವಾಗಿಲ್ಲ. ಮೈಸೂರು ಅಥವಾ ಹಾಸನಕ್ಕೆ ಐ ಐ ಟಿ ಮಂಜೂರು ಮಾಡಲು ಮನವಿ ಮಾಡಿದ್ದೆವು ಅದೂ ಕೂಡ ಆಗಿಲ್ಲ. ಇದೆಲ್ಲ ಅನ್ಯಾಯವಲ್ಲವೇ? ನಿರ್ಮಲಾ ಸೀತಾರಾಮನ್ ಹಿಂದೆಯೂ ಸುಳ್ಳು ಹೇಳಿದ್ದರು ಈಗಲೂ ಸುಳ್ಳು ಹೇಳುತ್ತಿದ್ದಾರೆ ಎಂದು ಕಿಡಿ ಕಾರಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

15 ನೇ ಹಣಕಾಸು ಯೋಜನೆಯಲ್ಲಿ ಅತಿ ಹೆಚ್ಚು ಅನ್ಯಾಯವಾಗಿರುವ ರಾಜ್ಯ ಕರ್ನಾಟಕ. ರಾಜ್ಯದಿಂದ ರಾಜ್ಯ ಸಭಾ ಸದಸ್ಯರಾಗಿರುವ ಅವರು ಕೈಗಾರಿಕೆಗಳೆಲ್ಲಾ ಬೇರೆ ರಾಜ್ಯಕ್ಕೆ ಹೋಗುತ್ತಿವೆ ಎಂದೂ ಹೇಳಿದ್ದಾರೆ. ಆದರೆ ನಮ್ಮ ಕೇಂದ್ರ ಸರ್ಕಾರದ ಹಣಕಾಸು ಸಚಿವರ ನೀತಿ , ಕಾರ್ಯಕ್ರಮಗಳಿಂದ ಶೇ 31% ನಮ್ಮ ದೇಶಕ್ಕೆ ಬರುತ್ತಿರುವ ಎಫ್.ಡಿ.ಐ ಕಡಿಮೆಯಾಗಿದೆ. ಕೇಂದ್ರಕ್ಕೆ ತೆರಿಗೆ ನೀಡುವಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದು, ಕರ್ನಾಟಕ 2 ನೇ ಸ್ಥಾನದಲ್ಲಿದೆ ಇನ್ನೇನು ಕೊಡುಗೆ ಕೊಡಬೇಕು? ಎಂದು ಪ್ರಶ್ನಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular