HomeKarnatakaಸಿದ್ದರಾಮಯ್ಯ, ಯಡಿಯೂರಪ್ಪ, ಖರ್ಗೆ, ಕುಮಾರಸ್ವಾಮಿಗೆ ತಮ್ಮ ಮಕ್ಕಳನ್ನು ಮಾತ್ರ ಬೆಳೆಸುವ ಚಿಂತೆ: ಮಾಜಿ ಸಂಸದ ಪ್ರತಾಪ್...

ಸಿದ್ದರಾಮಯ್ಯ, ಯಡಿಯೂರಪ್ಪ, ಖರ್ಗೆ, ಕುಮಾರಸ್ವಾಮಿಗೆ ತಮ್ಮ ಮಕ್ಕಳನ್ನು ಮಾತ್ರ ಬೆಳೆಸುವ ಚಿಂತೆ: ಮಾಜಿ ಸಂಸದ ಪ್ರತಾಪ್ ಸಿಂಹ

ಬೆಂಗಳೂರು: ಸಿದ್ದರಾಮಯ್ಯ, ಯಡಿಯೂರಪ್ಪ, ಮಲ್ಲಿಕಾರ್ಜುನ ಖರ್ಗೆ, ಹೆಚ್.ಡಿ. ಕುಮಾರಸ್ವಾಮಿ ಸೇರಿ ಎಲ್ಲರಿಗೂ ತಮ್ಮ ಮಕ್ಕಳದ್ದೆ ಚಿಂತೆಯಾದರೆ, ಕಂಡವರ ಮಕ್ಕಳನ್ನು ಬೆಳೆಸುವವರು ಯಾರು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ, ದೇವೇಗೌಡರು, ಮಹದೇವಪ್ಪ, ಯಡಿಯೂರಪ್ಪ ನೆಲದಿಂದ ಬೆಳೆದು ಬಂದು ನಾಯಕರಾಗಿದ್ದಾರೆ. ಮುಂದಿನ ಪೀಳಿಗೆಗೆ ಅವರು ಏನು ಕೊಟ್ಟರು ಎನ್ನುವುದು ಪ್ರಶ್ನೆ. ಕಂಡವರ ಮಕ್ಕಳನ್ನು ಬೆಳೆಸಿದ ದೇವರಾಜ ಅರಸು ದೇವರಾದರು. ಆದರೆ, ಸಿದ್ದರಾಮಯ್ಯ, ಯಡಿಯೂರಪ್ಪ, ಖರ್ಗೆ, ಕುಮಾರಣ್ಣ ಸೇರಿ ಎಲ್ಲರಿಗೂ ತಮ್ಮ ಮಕ್ಕಳದ್ದೇ ಚಿಂತೆಯಾದರೆ ಕಂಡವರ ಮಕ್ಕಳನ್ನು ಬೆಳೆಸುವವರು ಯಾರು ಎಂದು ಪ್ರಶ್ನಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular