HomeKarnatakaಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ವಿವಿಧ ಸೌಲಭ್ಯಕ್ಕೆ ಅರ್ಜಿ

ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ವಿವಿಧ ಸೌಲಭ್ಯಕ್ಕೆ ಅರ್ಜಿ

ಶಿವಮೊಗ್ಗ: ಶಿವಮೊಗ್ಗ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು 2024-25ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿ ಬಂಡಾವಳ ಹೂಡಿಕೆ ಸಹಾಯಧನ, ತರಬೇತಿ ಹಾಗೂ ತರಬೇತಿ ಪಡೆದ ಫಲಾನುಭವಿಗಳಿಗೆ ಸುಧಾರಿತ ಉಪಕರಣ ವಿತರಣೆ, ವೃತ್ತಿಪರ/ವೃತ್ತಿ ನಿರತ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ ಸರಬರಾಜು ಮತ್ತು ಬಡ್ಡಿ ಸಹಾಯಧನ ಸೌಲಭ್ಯ ನೀಡಲು ಆಸಕ್ತ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

ಆಸಕ್ತರು ಇಲಾಖೆಯ https://shimoga.nic.in ಪೊರ್ಟಲ್ ಮೂಲಕ ದಿ: 30/08/2024 ರೊಳಗಾಗಿ ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ.: 08182-223376, ಶಿವಮೊಗ್ಗ, ಭದ್ರಾವತಿ ಮತ್ತು ತೀರ್ಥಹಳ್ಳಿ ಕೈಗಾರಿಕಾ ವಿಸ್ತರಣಾಧಿಕಾರಿ ದೂ.ಸಂ.: 9380561275, ಸೊರಬ, ಶಿಕಾರಿಪುರ, ಹೊಸನಗರ ಕೈಗಾರಿಕಾ ವಿಸ್ತರಣಾಧಿಕಾರಿ ದೂ.ಸಂ.: 9481743640 ಹಾಗೂ ಸಾಗರ ಕೈಗಾರಿಕಾ ವಿಸ್ತರಣಾಧಿಕಾರಿ ದೂ.ಸಂ.: 9448401714 ಇವರುಗಳನ್ನು ಸಂಪರ್ಕಿಸುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular