alex Certify ಮದ್ಯಪ್ರಿಯರಿಗೆ ಮತ್ತೆ ಶಾಕ್: ಬಿಯರ್ ಪ್ರತಿ ಬಾಟಲ್ ಗೆ 5-20 ರೂ. ಹೆಚ್ಚಳ: ಒಂದೂವರೆ ವರ್ಷದಲ್ಲಿ 5ನೇ ಬಾರಿ ಬೆಲೆ ಏರಿಕೆ ಬರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದ್ಯಪ್ರಿಯರಿಗೆ ಮತ್ತೆ ಶಾಕ್: ಬಿಯರ್ ಪ್ರತಿ ಬಾಟಲ್ ಗೆ 5-20 ರೂ. ಹೆಚ್ಚಳ: ಒಂದೂವರೆ ವರ್ಷದಲ್ಲಿ 5ನೇ ಬಾರಿ ಬೆಲೆ ಏರಿಕೆ ಬರೆ

ಬೆಂಗಳೂರು: ಮದ್ಯಪ್ರಿಯರಿಗೆ ಮತ್ತೆ ಬೆಲೆ ಏರಿಕೆಯ ಬರೆ ಬಿದ್ದಿದೆ. ಕಳೆದ ತಿಂಗಳಷ್ಟೇ ಬಿಯರ್ ಬೆಲೆ ಏರಿಕೆ ಮಾಡಲಾಗಿತ್ತು. ಈಗ ಮತ್ತೆ ಬೆಲೆ ಏರಿಕೆ ಮಾಡಿದ್ದು, ಒಂದೂವರೆ ವರ್ಷದಲ್ಲಿ ಐದನೇ ಬಾರಿಗೆ ಬಿಯರ್ ದರ ಹೆಚ್ಚಳವಾಗಿದೆ.

ಪ್ರತಿ ಬಾಟಲ್ ಗೆ 5 -20 ರೂಪಾಯಿವರೆಗೆ ಹೆಚ್ಚಳ ಮಾಡಲಾಗಿದೆ. ಕೆಲವು ಕಂಪನಿಗಳ ಬಿಯರ್ ದರ ಕಳೆದ ಗುರುವಾರದಿಂದ ಏರಿಕೆಯಾಗಿದೆ. ಇನ್ನು ಕೆಲವು ಕಂಪನಿಗಳ ಪರಿಷ್ಕೃತ ದರ ಮಂಗಳವಾರ, ಬುಧವಾರ ಜಾರಿಯಾಗಲಿದೆ. ಎಲ್ಲಾ ಬ್ರಾಂಡ್ ಗಳ ಬಿಯರ್ ಬೆಲೆ ಪ್ರತಿ ಬಾಟಲಿಗೆ ಕನಿಷ್ಠ 5 ರಿಂದ 20 ರೂಪಾಯಿವರೆಗೆ ಹೆಚ್ಚಳವಾಗಲಿದೆ.

ಸರ್ಕಾರ ಬಿಯರ್ ಮೇಲಿನ ತೆರಿಗೆಯನ್ನು ಕಳೆದ ಜುಲೈ 1 ರಿಂದ ಅನ್ವಯವಾಗುವಂತೆ ಹೆಚ್ಚಳ ಮಾಡಿದೆ. ಪ್ರತಿ ಬಾಟಲ್ ಬಿಯರ್ ಬೆಲೆ ಕನಿಷ್ಠ 10 ರೂಪಾಯಿ ಜಾಸ್ತಿಯಾಗಿತ್ತು. ನಂತರ ಬಿಯರ್ ಉತ್ಪಾದನಾ ಕಂಪನಿಗಳು ಕಚ್ಚಾ ಸಾಮಗ್ರಿ ದರ ಹೆಚ್ಚಳ ಕಾರಣ ನೀಡಿ ಪ್ರತಿ ಬಿಯರ್ ಬಾಟಲ್ ಮೇಲೆ ಕನಿಷ್ಠ 5 ರಿಂದ 20 ರೂಪಾಯಿ ಹೆಚ್ಚಳಕ್ಕೆ ತೀರ್ಮಾನಿಸಿವೆ. ರಾಜ್ಯದಲ್ಲಿ ಹೆಚ್ಚಾಗಿ ಬಳಕೆಯಾಗುವ ಲೆಜೆಂಡ್, ಆರ್ಸಿ ಸ್ಟ್ರಾಂಗ್, ನಾಕೌಟ್, ಬುಲೆಟ್, ಪವರ್ ಕೂಲ್ ಸೇರಿ ಎಲ್ಲಾ ಬ್ರಾಂಡ್ ಗಳ ಬಿಯರ್ ಬೆಲೆ ಏರಿಕೆಯಾಗಲಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...