HomeKarnatakaBIG NEWS: ಡಿಕೆಶಿ ಆದೇಶದಂತೆ ಬಿ.ವೈ.ವಿಜಯೇಂದ್ರ ಪಾದಯಾತ್ರೆ: ಯತ್ನಾಳ್ ಹೇಳಿಕೆಗೆ ವ್ಯಂಗ್ಯವಾಡಿದ ಗೃಹ ಸಚಿವ ಪರಮೇಶ್ವರ್

BIG NEWS: ಡಿಕೆಶಿ ಆದೇಶದಂತೆ ಬಿ.ವೈ.ವಿಜಯೇಂದ್ರ ಪಾದಯಾತ್ರೆ: ಯತ್ನಾಳ್ ಹೇಳಿಕೆಗೆ ವ್ಯಂಗ್ಯವಾಡಿದ ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಡಿ.ಕೆ.ಶಿವಕುಮಾರ್ ಸೂಚನೆ ಮೇರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪಾದಯಾತ್ರೆ ಮಾಡುತ್ತಿದ್ದಾರೆ ಎಂಬ ಶಾಸಕ ಯತ್ನಾಳ್ ಹೇಳಿಕೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಮೊದಲು ಬಿಜೆಪಿಯವರು ತಮ್ಮ ಮನೆಯನ್ನು ಸರಿಪಡಿಸಿಕೊಳ್ಳಲಿ ಎಂದು ವ್ಯಂಗ್ಯವಾಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಬಿಜೆಪಿಯವರು ನಮಗೆ ಬುದ್ಧಿವಾದ ಹೇಳುವ ಮೊದಲು ತಮ್ಮ ಮನೆ ಸರಿಪಡಿಸಿಕೊಳ್ಳಲಿ. ಅವರದ್ದು ಮೂರು ಬಾಗಿಲೋ, ಆರು ಬಾಗಿಲೋ ಅಂತಾರಲ್ಲ ಹಾಗಾಗಿದೆ. ಸ್ವಪಕ್ಷದ ವಿರುದ್ಧವೇ ಬಿಜೆಪಿ ನಾಯಕರು ಹೇಳುತ್ತಿರುವ ಹೇಳಿಕೆಗಳನ್ನು ನೋಡಿದರೆ ಬಿಜೆಪಿಗೆ ಎಷ್ಟು ಬಾಗಿಲು ಎಂಬುದು ಗೊತ್ತಾಗುತ್ತಿಲ್ಲ ಎಂದು ಟಾಂಗ್ ನೀಡಿದರು.

ಮುಡಾ ಹಗರಣದ ವಿರುದ್ಧ ಬಿಜೆಪಿ ಪಾದಯಾತ್ರೆಗೆ ಅನುಮತಿ ನೀಡುವುದಿಲ್ಲ. ಅವರ ಪಾಡಿಗೆ ಅವರು ನಡೆದು ಹೋಗುವುದಾದರೆ ನಮ್ಮ ಅಭ್ಯಂತರವಿಲ್ಲ. ಆದರೆ ಪಾದಯಾತ್ರೆ ಹೋರಾಟಕ್ಕೆ ಅನುಮತಿ ಇಲ್ಲ. ಕಾನೂನು ಬಾಹಿರ ಕೆಲಸ ಮಾಡಿದರೆ ಕ್ರಮ ಜರುಗಿಸುತ್ತೇವೆ. ಜನರಿಗೆ ತೊಂದರೆಯಾದ್ರೆ ಮಾತ್ರ ಸುಮ್ಮನಿರಲ್ಲ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಬಿಜೆಪಿ ಪಾದಯಾತ್ರೆಗೆ ಪ್ರತಿಯಾಗಿ ನಾವು ಪಾದಯಾತ್ರೆ ಮಾಡಲ್ಲ. ಜನರಿಗೆ ಏನು ತಿಳಿಸಬೇಕು ಅದನ್ನು ಸಮಾವೇಶ ಮಾದರಿಯಲ್ಲಿ ತಿಳಿಸುತ್ತೇವೆ ಎಂದು ಹೇಳಿದರು.

 

For Latest News Updates, Join Our Whatsapp Community🚩
RELATED ARTICLES

Most Popular