ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಸೆಲ್ ಗೆ ಭಾರಿ ಬಿಗಿ ಭದ್ರತೆ ವಹಿಸಲಾಗಿದ್ದು, ಒಟ್ಟು 7 ಹೊಸ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಹೊರಗಿನಿಂದ ಯಾರಾದರೂ ನಟ ದರ್ಶನ್ ಭೇಟಿಗೆ ಬಂದರೆ ಅವರು ಬಂದು ಹೋಗುವವರೆಗೂ ಈ ಸಿಬ್ಬಂದಿಗಳು ಅವರ ಜೊತೆಯಲ್ಲೇ ಇರುತ್ತಾರೆ. ಸಿಬ್ಬಂದಿಯ ಭದ್ರತೆಯಲ್ಲಿ ದರ್ಶನ್ ಅವರನ್ನು ಕರೆತರಲಾಗುತ್ತದೆ. ಈ ಹಿಂದೆ ಸಿದ್ದಾರೂಡ ಎಂಬ ಕೈದಿ ಜೈಲಿನಿಂದ ಹೊರಗಡೆ ಬಂದ ಬಳಿಕ ತಾನು ಕೂಡ ದರ್ಶನ್ ಅವರನ್ನು ಭೇಟಿ ಮಾಡಿದ್ದೆ ಎಂದು ಹೇಳಿದ್ದನು. ಆದ್ದರಿಂದ ಇಂತಹ ಘಟನೆ ಮರುಕಳಿಸದಂತೆ ಹೆಚ್ಚುವರಿ ಭದ್ರತೆ ನೀಡಲಾಗಿದೆ.
ಹಾಗೂ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಜೈಲೂಟವೇ ಗತಿಯಾಗಿದೆ. ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯನ್ನು ನಟ ದರ್ಶನ್ ಪರ ವಕೀಲರು ವಾಪಸ್ ಪಡೆದುಕೊಂಡಿದ್ದಾರೆ. ಕೊಲೆ ಕೇಸ್ ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಗೆ ಜೈಲಿನ ಊಟ ಒಗ್ಗೂಡುತ್ತಿಲ್ಲ. ಅಜೀರ್ಣ, ಅತಿಸಾರವಾಗುತ್ತಿದೆ. ಹೀಗಾಗಿ ಮನೆಯೂಟ ನೀಡಲು ಅವಕಾಶ ಕೊಡಬೇಕು ಎಂದು ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಮನೆಯೂಟ, ಬಟ್ಟೆ, ಹಾಸಿಗೆ, ಪುಸ್ತಕ ನೀಡುವಂತೆ ಮನವಿ ಮಾಡಿದ್ದರು.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಕೋರ್ಟ್ ಗೆ ಚಾರ್ಚ್ ಶೀಟ್ ಸಲ್ಲಿಸಲು ಪೊಲೀಸರು ಕೂಡ ಸಿದ್ದತೆ ನಡೆಸಲಿದ್ದು, ಆಗಸ್ಟ್ ನಲ್ಲಿ ಚಾರ್ಜ್ ಸಲ್ಲಿಕೆ ಮಾಡಲಿದ್ದಾರೆ.