alex Certify BREAKING : ಬಾಲಿವುಡ್ ನಟ ಶಾರುಖ್ ಖಾನ್ ಅಮೆರಿಕದ ಆಸ್ಪತ್ರೆಗೆ ದಾಖಲು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬಾಲಿವುಡ್ ನಟ ಶಾರುಖ್ ಖಾನ್ ಅಮೆರಿಕದ ಆಸ್ಪತ್ರೆಗೆ ದಾಖಲು..!

ನವದೆಹಲಿ : ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರು ಕಣ್ಣಿನ ಸಮಸ್ಯೆಗೆ ವೈದ್ಯಕೀಯ ಚಿಕಿತ್ಸೆ ಪಡೆಯಲು ಯುಎಸ್ ಗೆ ಹಾರಿದ್ದಾರೆ.

ವರದಿಯ ಪ್ರಕಾರ, ಕಿಂಗ್ ಖಾನ್ ಅವರ ಕಣ್ಣಿನ ಸಂಬಂಧಿತ ಸಮಸ್ಯೆಗಳಿಗೆ ವೈದ್ಯಕೀಯ ಚಿಕಿತ್ಸೆಯ ಅಗತ್ಯವಿದೆ, ಈ ಹಿನ್ನೆಲೆ ಅವರು ಇಂದು ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲಿದ್ದಾರೆ.

ಕಣ್ಣಿನ ಚಿಕಿತ್ಸೆಗಾಗಿ ಜುಲೈ 29, ಸೋಮವಾರ ಎಸ್ಆರ್ಕೆ ಮುಂಬೈನ ಆಸ್ಪತ್ರೆಗೆ ಭೇಟಿ ನೀಡಿದ್ದರು, ಆದರೆ ಅವರ ಚಿಕಿತ್ಸೆಯು ಅಂದುಕೊಂಡಂತೆ ನಡೆಯಲಿಲ್ಲ” ಎಂದು ವರದಿಗಳು ತಿಳಿಸಿವೆ. ಈ ಹಿನ್ನೆಲೆ ಅವರನ್ನು ಯುಎಸ್ಎಗೆ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿದೆ.

ಮೇ ತಿಂಗಳ ಆರಂಭದಲ್ಲಿ ಐಪಿಎಲ್ ಪಂದ್ಯದ ವೇಳೆ ಹೀಟ್ ಸ್ಟ್ರೋಕ್ ನಿಂದ ಬಳಲುತ್ತಿದ್ದ ಶಾರುಖ್ ಖಾನ್ ಅವರನ್ನು ಅಹಮದಾಬಾದ್ ನ ಕೆಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಆಪ್ತ ಸ್ನೇಹಿತೆ ಮತ್ತು ಮಾಜಿ ಸಹನಟಿ ಜೂಹಿ ಚಾವ್ಲಾ ಮತ್ತು ಅವರ ಪತಿ ಕೂಡ ಆಸ್ಪತ್ರೆಯಲ್ಲಿ ಶಾರೂಕ್ ಖಾನ್ ಅವರನ್ನು ಭೇಟಿ ಮಾಡಿದ್ದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...