HomeKarnatakaJOB ALERT : ರಾಜ್ಯದಲ್ಲಿ 400 ಪಶು ವೈದ್ಯಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ ,ಇಲ್ಲಿದೆ ಮಾಹಿತಿ

JOB ALERT : ರಾಜ್ಯದಲ್ಲಿ 400 ಪಶು ವೈದ್ಯಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ ,ಇಲ್ಲಿದೆ ಮಾಹಿತಿ

ಬೆಂಗಳೂರು : ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 400 ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗೆ ಕೆಪಿಎಸ್ಸಿ ಅಧಿಸೂಚನೆ ಹೊರಡಿಸಿದೆ. ಆಗಸ್ಟ್ 12 ರಿಂದ ಸೆಪ್ಟೆಂಬರ್ 12ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಸಾಮಾನ್ಯ ಅಭ್ಯರ್ಥಿಗಳು ₹600, ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು ₹300, ಮಾಜಿ ಸೈನಿಕ ಅಭ್ಯರ್ಥಿಗಳು ₹50 ಶುಲ್ಕ ಪಾವತಿಸಬೇಕು. ಅಭ್ಯರ್ಥಿಗಳು ಕನ್ನಡ ಭಾಷಾ ಪರೀಕ್ಷೆಯಲ್ಲಿ ಅರ್ಹತೆ ಪಡೆಯುವುದು ಕಡ್ಡಾಯ. ತಲಾ 300 ಅಂಕಗಳಿಗೆ ನಡೆಯಲಿರುವ ಸ್ಪರ್ಧಾತ್ಮಕ ಮತ್ತು ನಿರ್ದಿಷ್ಟ ಪತ್ರಿಕೆಯಲ್ಲಿ ಗಳಿಸುವ ಅಂಕಗಳ ಶೇಕಡಾವಾರು ಆಧಾರದಲ್ಲಿ ಮತ್ತು ಮೀಸಲಾತಿ ನಿಯಮದ ಪ್ರಕಾರ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಕೆಪಿಎಸ್ಸಿ ತಿಳಿಸಿದೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular