alex Certify 11 ಕೋಟಿಗೂ ಹೆಚ್ಚು ರೈತರ ಖಾತೆಗೆ ಪಿಎಂ ಕಿಸಾನ್ ಕಂತು ಜಮಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

11 ಕೋಟಿಗೂ ಹೆಚ್ಚು ರೈತರ ಖಾತೆಗೆ ಪಿಎಂ ಕಿಸಾನ್ ಕಂತು ಜಮಾ

ನವದೆಹಲಿ: ಪಿಎಂ ಕಿಸಾನ್ ಯೋಜನೆಯಡಿ 11 ಕೋಟಿಗೂ ಹೆಚ್ಚು ರೈತರಿಗೆ 3.24 ಲಕ್ಷ ಕೋಟಿ ರೂಪಾಯಿಗಳನ್ನು ವಿತರಿಸಲಾಗಿದೆ.

ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಇಂದು ಲೋಕಸಭೆಯಲ್ಲಿ ಲಿಖಿತ ಉತ್ತರ ನೀಡಿದ್ದು, ಪಿಎಂ ಕಿಸಾನ್ ಯೋಜನೆಯ 17 ನೇ ಕಂತು ಈ ವರ್ಷದ ಜೂನ್‌ನಲ್ಲಿ 9.26 ಕೋಟಿ ರೈತರ ಕುಟುಂಬಗಳಿಗೆ 20 ಸಾವಿರ ಕೋಟಿ ರೂಪಾಯಿಗಳಿಗಿಂತ ಹೆಚ್ಚು ಮೊತ್ತವನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.,

ಒಟ್ಟು 51,849 ತರಬೇತಿ ಪಡೆದ ಕೃಷಿ ಸಖಿಗಳ ಪೈಕಿ 34,973 ಮಂದಿಗೆ ಕೃಷಿ ವಿಸ್ತರಣಾ ಕಾರ್ಯಕರ್ತೆಯ ಪ್ರಮಾಣ ಪತ್ರ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...