ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಭಾಗದಲ್ಲಿ ಮುಂದಿನ ಒಂದು ವಾರ ಭಾರಿ ಮಳೆಯಾಗುವ ಸಂಭವ ಇದೆ. ಹವಾಮಾನ ಇಲಾಖೆ ಬುಧವಾರ ಐದು ಜಿಲ್ಲೆ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.
ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ, ಶಿವಮೊಗ್ಗ, ಕೊಡಗು ಜಿಲ್ಲೆಗಳಿಗೆ ಬುಧವಾರ ರೆಡ್ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಭಾರಿ ಗಾಳಿ ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಮತ್ತು ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಮೈಸೂರು ಮತ್ತು ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಈ ಜಿಲ್ಲೆಗಳಲ್ಲಿ ಭಾರಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವ ಇದೆ. ಕರಾವಳಿ ಭಾಗದಲ್ಲಿ 35 ರಿಂದ 55 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. ಗುರುವಾರವೂ ರಾಜ್ಯದ ವಿವಿಧೆಡೆ ಭಾರಿ ಮಳೆಯಾಗುವ ಸಂಭವವಿದ್ದು, ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.