HomeKarnatakaವಿದ್ಯಾರ್ಥಿಗಳೇ ಗಮನಿಸಿ : ಕ.ರಾ.ಮು.ವಿ.ವಿಯಲ್ಲಿ ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ವಿದ್ಯಾರ್ಥಿಗಳೇ ಗಮನಿಸಿ : ಕ.ರಾ.ಮು.ವಿ.ವಿಯಲ್ಲಿ ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಮಡಿಕೇರಿ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ತನ್ನ 2024ನೇ ಜುಲೈ ಆವೃತ್ತಿಗೆ ಶೈಕ್ಷಣಿಕ ಕಾರ್ಯಕ್ರಮಗಳ ಪ್ರವೇಶಾತಿಗೆ ಈಗಾಗಲೇ ಆನ್ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೇಂದ್ರದ ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ತಿಳಿಸಿದ್ದಾರೆ.

ಮುಕ್ತ ವಿಶ್ವವಿದ್ಯಾಲಯವು ನಿಮ್ಮ ಮನೆಯೇ ನಿರಂತರ ಪಾಠಶಾಲೆ ಎಂಬ ಧ್ಯೆಯವಾಕ್ಯದೊಂದಿಗೆ ಯು.ಜಿ.ಸಿ ಅನುಮೋದಿತ ಶಿಕ್ಷಣ ಕ್ರಮಗಳ ಅಧ್ಯಯನದ ಅವಕಾಶವನ್ನು ವಿದ್ಯಾರ್ಥಿಗಳಿಗೆ ಈಗಾಗಲೇ ಹಲವು ವರ್ಷಗಳಿಂದ ನೀಡುತ್ತಾ ಬಂದಿದೆ. ಕರ್ನಾಟಕಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ರಾಜ್ಯದಲ್ಲಿ ಮುಕ್ತ ಶಿಕ್ಷಣ ನೀಡುವ ಏಕೈಕ ವಿದ್ಯಾಲಯವಾಗಿದೆ.

ಸ್ನಾತಕ ಶಿಕ್ಷಣ ಕಾರ್ಯಕ್ರಮಗಳ ಅಡಿಯಲ್ಲಿ ಬರುವ (ಬಿ.ಎ, ಬಿ.ಕಾಂ, ಬಿ.ಲಿಬ್ ಐಎಸ್ಸಿ, ಬಿ.ಬಿ.ಎ, ಬಿ.ಸಿ.ಎ, ಬಿ.ಎಸ್ಸಿ, ಬಿ.ಎಸ್.ಡಬ್ಲೂ) ಹಾಗು ಸ್ನಾತಕೋತ್ತರ ಪಿ.ಜಿ. ಕೋಸರ್್ಗಳಾದ (ಎಂ.ಎ, ಎಂ.ಎ- ಪತ್ರಿಕೋದ್ಯಮ, ಎಂ.ಕಾಂ, ಎಂ.ಬಿ.ಎ, ಎಂ.ಲಿಬ್ಐ.ಎಸ್ಸಿ, ಎಂ.ಎಸ್ಸಿ, ಎಂ.ಸಿ.ಎ, ಎಂ.ಎಸ್,ಡಬ್ಲೂ) (ಪಿ.ಜಿ. ಡಿಪ್ಲೋಮಾ ಪ್ರೋಗ್ರಾಮ್ಸ್., ಡಿಪ್ಲೋಮಾ ಪ್ರೋಗ್ರಾಮ್ಸ್., ಸರ್ಟಿಫಿಕೇಟ್ ಪ್ರೋಗ್ರಾಮ್ಸ್) ಕೋರ್ಸ್ ಗಳಿಗೆ ಪ್ರವೇಶಾತಿ ಆರಂಭವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗೆ ಮಡಿಕೇರಿ ಜೂನಿಯರ್ ಕಾಲೇಜು ಆವರಣದ ಭವನದಲ್ಲಿರುವ ಪ್ರಾದೇಶಿಕ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ಅವರು ಕೋರಿದ್ದಾರೆ. ಮಾಹಿತಿಗೆ 9844395986, 8296215714, 9483570900, 7411233007 ಸಂಪರ್ಕಿಸಬಹುದಾಗಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular