ವಯನಾಡ್ ನ ಮೆಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶಗಳಲ್ಲಿ ಭಾರಿ ಭೂಕುಸಿತ ಸಂಭವಿಸಿದ್ದು, ಕನಿಷ್ಠ 156 ಜನರು ಸಾವನ್ನಪ್ಪಿದ್ದಾರೆ ಮತ್ತು 180 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಸರ್ಕಾರದ ಅಂಕಿಅಂಶಗಳ ಪ್ರಕಾರ, 100 ಕ್ಕೂ ಹೆಚ್ಚು ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ.
ಭಾರೀ ಮಳೆಯ ನಡುವೆ ಮಂಗಳವಾರ ನಾಲ್ಕು ಗಂಟೆಗಳ ಅವಧಿಯಲ್ಲಿ ವಯನಾಡ್ನಲ್ಲಿ ಮೂರು ಭೂಕುಸಿತಗಳು ಸಂಭವಿಸಿದ್ದು, ಮುಂಡಕ್ಕೈ, ಚೂರಲ್ಮಾಲಾ, ಅಟ್ಟಮಾಲಾ ಮತ್ತು ನೂಲ್ಪುಳ ಗ್ರಾಮಗಳಲ್ಲಿ ಜನರು ಸಂಕಷ್ಟ ಎದುರಿಸುತ್ತಿದ್ದಾರೆ. ಚಾಲಿಯಾರ್ ನದಿಯಲ್ಲಿ ಹಲವಾರು ಜನರು ಕೊಚ್ಚಿ ಹೋಗಿದ್ದಾರೆ.
ವಯನಾಡ್ ನಲ್ಲಿ 45 ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದ್ದು, 3,069 ಜನರಿಗೆ ಆಶ್ರಯ ನೀಡಲಾಗಿದೆ. ಸುಂದರವಾದ ಸ್ಥಳಗಳು ಮತ್ತು ಚಹಾ ಎಸ್ಟೇಟ್ಗಳಿಗೆ ಹೆಸರುವಾಸಿಯಾದ ಜಿಲ್ಲೆಯಲ್ಲಿ ಮರಗಳು ಬುಡಮೇಲಾಗಿರುವ ಮತ್ತು ಹಾನಿಗೊಳಗಾದ ಮನೆಗಳ ವಿಡಿಯೋ ವೈರಲ್ ಆಗಿದೆ.