HomeKarnatakaಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್; ಪ್ರವೇಶದ ಅವಧಿ ವಿಸ್ತರಣೆ

ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್; ಪ್ರವೇಶದ ಅವಧಿ ವಿಸ್ತರಣೆ

ರಾಯಚೂರಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್‌ನಲ್ಲಿ 2024-25ನೇ ಸಾಲಿಗೆ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು 2024ರ ಆಗಸ್ಟ್ 06ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.

ಆಸಕ್ತರು ಎಸ್.ಎಸ್.ಎಲ್.ಸಿ/ ತತ್ಸಮಾನ ಪರೀಕ್ಷೆಯಲ್ಲಿ ಪಾಸಾಗಿರುವ ಹಾಗೂ ಐ.ಟಿ.ಐ ಮತ್ತು ಪಿ.ಯು.ಸಿ ವಿಜ್ಞಾನ ಪಾಸಾಗಿರುವ ಅಭ್ಯರ್ಥಿಗಳಿಗೆ ಪ್ರಥಮ ಸೆಮಿಸ್ಟರ್/ ಲ್ಯಾಟರಲ್ ಎಂಟ್ರಿ, 3ನೇ ಸೆಮಿಸ್ಟರ್ ಡಿಪ್ಲೋಮಾಗೆ ಆನ್‌ಲೈನ್ ಆಧಾರಿತ ಕೋರ್ಸುಗಳಲ್ಲಿನ ಭರ್ತಿ ಆಗದ ಖಾಲಿ ಉಳಿದಿರುವ ಸೀಟುಗಳಿಗೆ ಆಫ್‌ಲೈನ್ ಮೂಲಕ ಸಂಸ್ಥೆಯ ಪ್ರಾಚಾರ್ಯರಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕಚೇರಿ ಸಮಯದಲ್ಲಿ ಸಂಸ್ಥೆಯ ಪ್ರಾಂಶುಪಾಲರನ್ನು ಸಂಪರ್ಕಿಸುವಂತೆ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular