alex Certify ಶಾಲೆಗೆ ಬಂದೂಕು ತಂದು ವಿದ್ಯಾರ್ಥಿ ಮೇಲೆ ಗುಂಡು ಹಾರಿಸಿದ ಪುಟಾಣಿ ಬಾಲಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲೆಗೆ ಬಂದೂಕು ತಂದು ವಿದ್ಯಾರ್ಥಿ ಮೇಲೆ ಗುಂಡು ಹಾರಿಸಿದ ಪುಟಾಣಿ ಬಾಲಕ

ಪಾಟ್ನಾ: ಬಿಹಾರದಲ್ಲಿ ಐದು ವರ್ಷದ ಬಾಲಕನೊಬ್ಬ ಇಂದು ಶಾಲೆಗೆ ಬಂದೂಕು ತಂದು ಮತ್ತೊಂದು ಮಗುವಿನ ಮೇಲೆ ಗುಂಡು ಹಾರಿಸಿದ್ದಾನೆ.

3ನೇ ತರಗತಿ ವಿದ್ಯಾರ್ಥಿ ಗಾಯಗೊಂಡಿದ್ದಾನೆ. ನರ್ಸರಿ ವಿದ್ಯಾರ್ಥಿಯಾಗಿದ್ದ ಬಾಲಕ ತನ್ನ ಬ್ಯಾಗ್‌ನಲ್ಲಿ ಬಂದೂಕನ್ನು ಬಚ್ಚಿಟ್ಟುಕೊಂಡು ಶಾಲೆಗೆ ಬಂದಿದ್ದ. ಉತ್ತರ ಬಿಹಾರ ಜಿಲ್ಲೆಯ ಸುಪೌಲ್‌ನಲ್ಲಿ ಘಟನೆ ನಡೆದಿದೆ.

ಪೊಲೀಸ್ ವರಿಷ್ಠಾಧಿಕಾರಿ(ಎಸ್ಪಿ) ಶೈಶವ್ ಯಾದವ್ ಪ್ರಕಾರ, ವಿದ್ಯಾರ್ಥಿಯು ಅದೇ ಶಾಲೆಯಲ್ಲಿ 3 ನೇ ತರಗತಿಯಲ್ಲಿ ಓದುತ್ತಿರುವ 10 ವರ್ಷದ ಬಾಲಕನ ಮೇಲೆ ಗುಂಡು ಹಾರಿಸಿದ್ದಾನೆ. ಗುಂಡು ಅವನ ತೋಳಿಗೆ ತಗುಲಿದೆ. ನಾವು ವಿದ್ಯಾರ್ಥಿಗಳ ಬ್ಯಾಗ್ ಗಳನ್ನು ನಿಯಮಿತವಾಗಿ ಪರಿಶೀಲಿಸುವಂತೆ ಶಾಲೆಯವರಿಗೆ ತಿಳಿಸಿದ್ದೇವೆ. ಈ ಘಟನೆ ಶಿಕ್ಷಕರು ಮತ್ತು ಪೋಷಕರಲ್ಲಿ ಹೆಚ್ಚಿನ ಆತಂಕ ಮೂಡಿಸಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...