alex Certify ಪಿಜಿ ದಂತ ವೈದ್ಯ ಕೋರ್ಸ್ ಗೆ ಆ. 3ರಿಂದ ಎರಡನೇ ಸುತ್ತಿನ ಸೀಟು ಹಂಚಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಿಜಿ ದಂತ ವೈದ್ಯ ಕೋರ್ಸ್ ಗೆ ಆ. 3ರಿಂದ ಎರಡನೇ ಸುತ್ತಿನ ಸೀಟು ಹಂಚಿಕೆ

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆಗಸ್ಟ್ 3ರಿಂದ ಆರಂಭವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ತಿಳಿಸಿದೆ.

ಪಿಜಿಇಟಿ -ಎಂಡಿಎಸ್ ಕೋರ್ಸ್ ಗಳ ಸೀಟು ಹಂಚಿಕೆಯನ್ನು ಆಗಸ್ಟ್ 3ರಿಂದ ಆರಂಭಿಸಲಿದ್ದು, ಮೊದಲನೇ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿದ್ದರೂ ಮುಂದಿನ ಸುತ್ತಿನ ಕೌನ್ಸೆಲಿಂಗ್ ಗೆ ಆಯ್ಕೆ ಮಾಡಿಕೊಂಡಿರುವ ಹಾಗೂ ಯಾವುದೇ ಸೀಟು ಹಂಚಿಕೆಯಾಗದೇ ಇರುವವರು ಆಗಸ್ಟ್ 3ರಿಂದ ಕೆಇಎ ಕಚೇರಿಯಲ್ಲಿ ತಮ್ಮ ಎಲ್ಲ ಮೂಲ ದಾಖಲೆಗಳನ್ನು ಸಲ್ಲಿಸಬೇಕಿದೆ. ದಾಖಲೆ ಸಲ್ಲಿಸದಿದ್ದರೆ ಅಂತವರಿಗೆ ಸೀಟು ಹಂಚಿಕೆ ಮಾಡಲಾಗುವುದಿಲ್ಲ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

ಎರಡನೇ ಸುತ್ತಿನ ಸೀಟು ಹಂಚಿಕೆಗೆ ಆಗಸ್ಟ್ 3ರಂದು ಸೀಟ್ ಮ್ಯಾಟ್ರಿಕ್ಸ್ ಪ್ರಕಟಿಸಲಾಗುವುದು. ಆಗಸ್ಟ್ 4ರಿಂದ 6ರವರೆಗೆ ಆಯ್ಕೆ ದಾಖಲಿಸಲು ಕಾಲಾವಕಾಶ ನೀಡಲಾಗುವುದು. ಆಗಸ್ಟ್ 7ರಂದು ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶ ಹಾಗೂ ಆಗಸ್ಟ್ 8ರಂದು ಅಂತಿಮ ಫಲಿತಾಂಶ ಪ್ರಕಟಿಸಲಿದ್ದು, ಆಗಸ್ಟ್ 13 ಕಾಲೇಜಿಗೆ ವರದಿ ಮಾಡಿಕೊಳ್ಳಲು ಕೊನೆಯ ದಿನ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...