HomeKarnatakaರಾಜ್ಯಪಾಲರ ನೋಟೀಸ್ ಹಿಂಪಡೆಯುವಂತೆ ಒತ್ತಾಯ; ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ

ರಾಜ್ಯಪಾಲರ ನೋಟೀಸ್ ಹಿಂಪಡೆಯುವಂತೆ ಒತ್ತಾಯ; ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಿಎಂ ಸಿದ್ದರಾಮಯ್ಯನವರಿಗೆ ನೋಟೀಸ್ ನೀಡಿರುವ ಹಿನ್ನೆಲೆಯಲ್ಲಿ ತಮ್ಮ ವಿರುದ್ಧದ ಆರೋಪದ ಬಗ್ಗೆ ಮಹತ್ವದ ನಿರ್ಣಯ ಕೈಗೊಳ್ಳುತ್ತಿದ್ದ ಕಾರಣ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಇಷ್ಟು ದಿನ ಸಿಎಂ ನೇತೃತ್ವದಲ್ಲಿ ನಡೆಯುತ್ತಿದ್ದ ಸಚಿವ ಸಂಪುಟ ಸಭೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆದಿದ್ದು, ಎರಡು ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ.

ರಾಜ್ಯಪಾಲರು ಸಿಎಂ ಸಿದ್ದರಾಮಯ್ಯಗೆ ನೀಡಿರುವ ನೋಟಿಸ್ ಹಿಂಪಡೆಯುವಂತೆ ಒತ್ತಾಯಿಸಿ ನಿರ್ಣಯ ಕೈಗೊಳ್ಳಲಾಯಿತು. ಮುಡಾ ವಿಚಾರವಾಗಿ ರಾಜ್ಯಪಾಲರ ನೋಟೀಸ್ ರಾಜಕೀಯ ಪ್ರೇರಿತವಾಗಿದ್ದು, ಈ ನಿಟ್ಟಿನಲ್ಲಿ ಕಾನೂನು ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ ಮುಂದಾಗಬೇಕು. ಎಲ್ಲಾ ಸಚಿವರು ಸಿಎಂ ಸಿದ್ದರಾಮಯ್ಯನವರಿಗೆ ಬೆಂಬಲವಾಗಿ ನಿಲ್ಲುವಂತೆ ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular