alex Certify ಆ.4 ರಂದು ‘PGCET’ ಪರೀಕ್ಷೆ ; ಪರೀಕ್ಷಾ ಕೇಂದ್ರದ ಸುತ್ತಮುತ್ತ ‘ಪ್ರತಿಬಂಧಕಾಜ್ಞೆ’ ಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆ.4 ರಂದು ‘PGCET’ ಪರೀಕ್ಷೆ ; ಪರೀಕ್ಷಾ ಕೇಂದ್ರದ ಸುತ್ತಮುತ್ತ ‘ಪ್ರತಿಬಂಧಕಾಜ್ಞೆ’ ಜಾರಿ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಆ.04 ರಂದು 2024 ನೇ ಸಾಲಿನ ಪಿಜಿಸಿಇಟಿ ಪರೀಕ್ಷೆಗಳು ನಗರದ ಒಟ್ಟು 07 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿದ್ದು, ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಅಗತ್ಯವಾದ ಸಕಲ ಸಿದ್ದತೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಶಿವಮೊಗ್ಗ ಜಿಲ್ಲಾಡಳಿತ ಕಚೇರಿಯ ಕಚೇರಿ ಸಹಾಯಕರಾದ ಪ್ರದೀಪ್ ನಿಕ್ಕಂ ತಿಳಿಸಿದರು.

ಶಿವಮೊಗ್ಗ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆ.01 ರಂದು ಏರ್ಪಡಿಸಲಾಗಿದ್ದ 2024 ನೇ ಸಾಲಿನ ಪಿಜಿಸಿಇಟಿ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಆಸನ ವ್ಯವಸ್ಥೆ, ಮೂಲಭೂತ ಸೌಕರ್ಯಗಳು ಸೇರಿದಂತೆ ಪಾರದರ್ಶಕವಾಗಿ ಪರೀಕ್ಷೆ ನಡೆಯಲು ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

ಆ.04 ರಂದು ನಗರದ 07 ಪರೀಕ್ಷಾ ಕೇಂದ್ರಗಳಲ್ಲಿ ಬೆಳಿಗ್ಗೆ 10.30 ರಿಂದ 12.30 ರವರೆಗೆ ಮತ್ತು ಮಧ್ಯಾಹ್ನ 2.30 ರಿಂದ ಸಂಜೆ 4.30 ರವರೆಗೆ ಪರೀಕ್ಷೆಗಳು ನಡೆಯಲಿವೆ. ಬೆಳಗಿನ ಅಧಿವೇಶನದಲ್ಲಿ ಎಂಸಿಎ ಮತ್ತು ಮಧ್ಯಾಹ್ನದ ಅಧಿವೇಶನದಲ್ಲಿ ಎಂಬಿಎ ಗೆ ಪಿಜಿಸಿಇಟಿ ಪರೀಕ್ಷೆಗಳು ನಡೆಯಲಿವೆ.
ಎಂಸಿಎ ಗೆ 1286 ಮತ್ತು ಎಂಬಿಎ ಗೆ 2421 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪ್ರಶ್ನೆ ಪತ್ರಿಕೆ ಸಾಗಾಟ ಮಾಡಲು ತ್ರಿಸದಸ್ಯ ಸಮಿತಿ ನೇಮಿಸಿ ಈಗಾಗಲೇ ಆದೇಶಿಸಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀ ವ್ಯಾಪ್ತಿಯಲ್ಲಿ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ-23 ರ ಕಲಂ 163 ರನ್ವಯ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಿ ಆದೇಶಿಸಲಾಗಿದೆ.

ಪ್ರಶ್ನೆ ಪತ್ರಿಕೆ ಸಾಗಾಟ ವಾಹನಕ್ಕೆ ಹಾಗೂ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಬಂದೋಬಸ್ತ್ಗೆ ಪೊಲೀಸ್ ಇಲಾಖೆಗೆ ಪತ್ರ ಬರೆಯಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಮೂರು ಜನ ಅಧಿಕಾರಿಗಳನ್ನೊಳಗೊಂಡ ತ್ರಿಸದಸ್ಯ ಸಮಿತಿಯನ್ನು ಹಾಗೂ ಪ್ರತಿ ಕೇಂದ್ರಕ್ಕೆ ವೀಕ್ಷಕರು, ಪ್ರಶ್ನೆ ಪತ್ರಿಕೆ ಪಾಲಕರು, ಜಾಗೃತ ದಳದ ಸಿಬ್ಬಂದಿಗಳು ಮತ್ತು ಅಗತ್ಯವಿರುವ ಅಧಿಕಾರಿ, ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದರು.

ಪರೀಕ್ಷೆಗಳನ್ನು ಶಾಂತಯುತವಾಗಿ ನಡೆಸಲು ಪರೀಕ್ಷಾ ಅವಧಿಯಲ್ಲಿ ಯಾವುದೇ ರೀತಿಯ ಅವ್ಯವಹಾರಗಳು ನಡೆಯದಂತೆ ಮುಂಜಾಗ್ರತಾ ಕ್ರಮ ಹಾಗೂ ಮುನ್ನೆಚ್ಚರಿಕೆ ಕ್ರಮವಾಗಿ ಪ್ರತಿ ಕೇಂದ್ರಗಳಿಗೂ ಓರ್ವ ಮಹಿಳಾ ಮತ್ತು ಓರ್ವ ಪುರಷ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲು ಹಾಗೂ ಜಿಲ್ಲಾ ಖಜಾನೆಯಿಂದ ಪ್ರಶ್ನೆಪತ್ರಿಕೆಗಳನ್ನು ತರಲು ಪ್ರತಿ ಮಾರ್ಗಕ್ಕೆ ಪೊಲೀಸ್ ಸಿಬ್ಬಂದಿ ನಿಯೋಜಿಸಲು ಪೊಲೀಸ್ ಇಲಾಖೆಗೆ ಕೋರಲಾಗಿದೆ ಎಂದರು.
ಡಿಡಿಪಿಯು ಚಂದ್ರಪ್ಪ ಗುಂಡೆಪಲ್ಲಿ ಮಾತನಾಡಿ, ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಸಿಸಿ ಟಿವಿ ಅಳವಡಿಸಲಾಗಿದ್ದು ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಗೊಂದಲವಿಲ್ಲದೇ ಸುಸೂತ್ರವಾಗಿ ಪರೀಕ್ಷೆಗಳು ನಡೆಯಲು ಅವಶ್ಯಕವಾದ ಸಕಲ ಸಿದ್ದತಗಳನ್ನು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಖಜಾನಾಧಿಕಾರಿ ಸಾವಿತ್ರಿ, ವಿವಿಧ ಕಾಲೇಜುನಗಳ ಪ್ರಾಂಶುಪಾಲರು, ಪರೀಕ್ಷೆಗೆ ನಿಯೋಜಿತರಾದ ಅಧಿಕಾರಿಗಳು ಪಾಲ್ಗೊಂಡಿದ್ದರು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...