HomeKarnatakaBREAKING NEWS: ಮಟನ್ ಊಟ ಮಾಡಿದ್ದ ಒಂದೇ ಕುಟುಂಬದ ನಾಲ್ವರು ಸಾವು

BREAKING NEWS: ಮಟನ್ ಊಟ ಮಾಡಿದ್ದ ಒಂದೇ ಕುಟುಂಬದ ನಾಲ್ವರು ಸಾವು

ರಾಯಚೂರು: ಮಟನ್ ಊಟ ಸೇವಿಸಿದ್ದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ದಾರುಣ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

ಇಲ್ಲಿನ ಸಿರವಾರ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಮೃತರನ್ನು ಭೀಮಣ್ಣ(60), ಈರಮ್ಮ (54), ಮಲ್ಲೇಶ್ (19) ಹಾಗೂ ಪಾರ್ವತಿ (17) ಎಂದು ಗುರುತಿಸಲಾಗಿದೆ.

ಮಲ್ಲಮ್ಮ ಎಂಬುವವರ ಸ್ಥಿತಿ ಗಂಭೀರವಾಗಿದ್ದು, ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಟನ್ ಮಾಡುವ ವೇಳೆ ಅಡುಗೆಯಲ್ಲಿ ಹಲ್ಲಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಘಟನಾ  ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular