ಬೆಂಗಳೂರು : ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ 2000 ಹಣ ನೀಡಲಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಯು ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವ ಯೋಜನೆಯಾಗಿದೆ.
ಇದೀಗ ಗುಡ್ ನ್ಯೂಸ್ ಅಂದರೆ ಗೃಹಲಕ್ಷ್ಮಿ ಯೋಜನೆಯ ಜೂನ್ ಹಾಗೂ ಜುಲೈ ತಿಂಗಳ ಹಣ ಈ ವಾರ ಖಾತೆಗೆ ಬೀಳಲಿದೆ. ಸರ್ಕಾರವೇ ಈ ಬಗ್ಗೆ ಮಾಹಿತಿ ನೀಡಿದ್ದು, ಜೂನ್ ಮತ್ತು ಜುಲೈತಿಂಗಳ 2 ತಿಂಗಳ ಕಂತಿನ ಹಣವನ್ನು ಒಟ್ಟಿಗೆ ಇದೇ ಆಗಸ್ಟ್ ಮೊದಲ ವಾರದಲ್ಲಿ ಯಜಮಾನಿಯರ ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.
ಕೆಲವು ತಾಂತ್ರಿಕ ತೊಂದರೆಯಿಂದ ಸರ್ಕಾರ ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಜಮಾ ಮಾಡಿರಲಿಲ್ಲ. ಇದೀಗ ಸರ್ಕಾರ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸಿದ್ದು, ಆಗಸ್ಟ್ ಮೊದಲ ವಾರದಲ್ಲಿ ಜೂನ್ ಹಾಗೂ ಜುಲೈ ತಿಂಗಳ ಗೃಹಲಕ್ಷ್ಮಿ ಹಣ ಜಮಾ ಆಗಲಿದೆ . ಇನ್ಮುಂದೆ ಪ್ರತಿ ತಿಂಗಳು 15 ರೊಳಗೆ ಗೃಹಲಕ್ಷ್ಮಿ ಹಣ ಜಮಾ ಆಗಲಿದೆ ,ಚಿಂತೆ ಬೇಡ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇತ್ತೀಚೆಗೆ ಹೇಳಿದ್ದರು. ಪ್ರತಿ ತಿಂಗಳ 15 ನೇ ತಾರೀಖಿನ ಒಳಗಾಗಿ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ ಆಗಲಿದೆ. ಈ ಬಗ್ಗೆ ಯಾರೂ ಚಿಂತೆ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದರು.