alex Certify ಒಳಮೀಸಲಾತಿ ಬಗ್ಗೆ ಸುಪ್ರೀಂಕೋರ್ಟ್ ತೀರ್ಪು ಐತಿಹಾಸಿಕವಾಗಿದೆ ; ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಳಮೀಸಲಾತಿ ಬಗ್ಗೆ ಸುಪ್ರೀಂಕೋರ್ಟ್ ತೀರ್ಪು ಐತಿಹಾಸಿಕವಾಗಿದೆ ; ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಪರಿಶಿಷ್ಟರಲ್ಲಿ ಅತಿಹಿಂದುಳಿದವರನ್ನು ಗುರುತಿಸಿ ಒಳಮೀಸಲಾತಿ ನೀಡುವ ರಾಜ್ಯ ಸರ್ಕಾರಗಳ ಅಧಿಕಾರವನ್ನು ಎತ್ತಿಹಿಡಿದಿರುವ ಸುಪ್ರೀಂ ಕೋರ್ಟ್ ತೀರ್ಪು ಐತಿಹಾಸಿಕವಾದುದ್ದಾಗಿದೆ. ಇದನ್ನು ನಾನು ಮುಕ್ತವಾಗಿ ಸ್ವಾಗತಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಪರಿಶಿಷ್ಟರಲ್ಲಿ ಅತಿಹಿಂದುಳಿದವರನ್ನು ಗುರುತಿಸಿ ಒಳಮೀಸಲಾತಿ ನೀಡುವ ರಾಜ್ಯ ಸರ್ಕಾರಗಳ ಅಧಿಕಾರವನ್ನು ಎತ್ತಿಹಿಡಿದಿರುವ ಸುಪ್ರೀಂ ಕೋರ್ಟ್ ತೀರ್ಪು ಐತಿಹಾಸಿಕವಾದುದ್ದಾಗಿದೆ. ಇದನ್ನು ನಾನು ಮುಕ್ತವಾಗಿ ಸ್ವಾಗತಿಸುತ್ತೇನೆ. ಈ ತೀರ್ಪಿನ ಹಿನ್ನೆಲೆಯಲ್ಲಿ ನ್ಯಾ.ಎ.ಜೆ.ಸದಾಶಿವ ಆಯೋಗದ ಶಿಫಾರಸುಗಳನ್ನು ಕೂಲಂಕಷವಾಗಿ ಅಧ್ಯಯನ ನಡೆಸಿ ಅಗತ್ಯ ಬಿದ್ದರೆ ಇದಕ್ಕೆ ಸಂಬಂಧಿಸಿದಂತೆ ಇತ್ತೀಚಿನ ಬೆಳವಣಿಗೆಗಳನ್ನು ಪರಿಗಣನೆಗೆ ತೆಗೆದುಕೊಂಡು ಸಮಾಲೋಚನೆ – ಸಂಧಾನದ ಮೂಲಕ ಒಳಮೀಸಲಾತಿ ಬಗ್ಗೆ ಸ್ಪಷ್ಟವಾದ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಳ್ಳಲಿದೆ.

ಪರಿಶಿಷ್ಟರಲ್ಲಿ ಅತಿಹಿಂದುಳಿದವರನ್ನು ಗುರುತಿಸಿ ಒಳಮೀಸಲಾತಿ ನೀಡುವ ರಾಜ್ಯ ಸರ್ಕಾರಗಳ ಅಧಿಕಾರವನ್ನು ಎತ್ತಿಹಿಡಿದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಐತಿಹಾಸಿಕವಾದುದ್ದಾಗಿದೆ. ನ್ಯಾಯಾಲಯದ ಈ ತೀರ್ಪನ್ನು ನಾನು ಮುಕ್ತವಾಗಿ ಸ್ವಾಗತಿಸುತ್ತೇನೆ. ಸುಪ್ರೀಂ ಕೋರ್ಟ್ ತೀರ್ಪಿನಿಂದಾಗಿ ಒಳಮೀಸಲಾತಿ ಅನುಷ್ಠಾನದ ಹಾದಿಯಲ್ಲಿನ ಮುಖ್ಯ ಅಡ್ಡಿಯೊಂದು ನಿವಾರಣೆಯಾಗಿದೆ. ತೀರ್ಪಿನಲ್ಲಿರುವ ವಿವಾದಾತ್ಮಕ ಕೆನೆಪದರದ ಬಗೆಗಿನ ಅಂಶವೂ ಸೇರಿದಂತೆ ಇತರ ವಿಷಯಗಳ ಬಗ್ಗೆ ಪರಿಶಿಷ್ಟ ಜಾತಿಯ ನಾಯಕರು ಮತ್ತು ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಸಿ ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಲಾಗುವುದು. ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಕಲ್ಪಿಸುವ ಬಗ್ಗೆ ಕಾಂಗ್ರೆಸ್ ಪಕ್ಷ ಬದ್ಧವಾಗಿದೆ. ಹಿಂದೆ ಕಾಂಗ್ರೆಸ್ ಪಕ್ಷದ ಸರ್ಕಾರವೇ ರಚಿಸಿದ್ದ ನ್ಯಾ.ಎ.ಜೆ.ಸದಾಶಿವ ಅವರ ಅಧ್ಯಕ್ಷತೆಯ ಆಯೋಗದ ವರದಿಯನ್ನು ಅನುಷ್ಠಾನಗೊಳಿಸುವುದಾಗಿ ನಾವು ಕಳೆದ ವಿಧಾನಸಭಾ ಚುನಾವಣೆಯಲ್ಲಿನ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗೆ ಸರ್ಕಾರ ಬದ್ಧವಾಗಿದೆ.

ಈ ನಡುವೆ ಕಳೆದ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ರಾಜ್ಯದ ಸರ್ಕಾರ ಒಳಮೀಸಲಾತಿ ಬಗ್ಗೆ ಅವಸರದಲ್ಲಿ ತೀರ್ಮಾನ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಟ್ಟಿತ್ತು. ಪರಿಶಿಷ್ಟ ಜಾತಿಯೊಳಗಿನ ಮೀಸಲಾತಿಯನ್ನು ಸಂವಿಧಾನ ತಿದ್ದುಪಡಿಯ ಮೂಲಕ ಅನುಷ್ಠಾನಗೊಳಿಸಬಹುದು ಎಂದು ಕೇಂದ್ರ ಬಿಜೆಪಿ ಸರ್ಕಾರವೇ ರಚಿಸಿದ್ದ ಉಷಾ ಮೆಹ್ರಾ ಸಮಿತಿ ಸ್ಪಷ್ಟವಾಗಿ ತಿಳಿಸಿದ್ದರೂ ಕೇಂದ್ರ ಸರ್ಕಾರ ಇಲ್ಲಿಯ ವರೆಗೆ ತೀರ್ಮಾನ ಕೈಗೊಳ್ಳದೆ ಮೂಲೆಗೆ ಸರಿಸಿತ್ತು. ಈಗಿನ ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ನ್ಯಾ.ಎ.ಜೆ.ಸದಾಶಿವ ಆಯೋಗದ ಶಿಫಾರಸುಗಳನ್ನು ಕೂಲಂಕಷವಾಗಿ ಅಧ್ಯಯನ ನಡೆಸಿ, ಅಗತ್ಯ ಬಿದ್ದರೆ ಇದಕ್ಕೆ ಸಂಬಂಧಿಸಿದಂತೆ ಇತ್ತೀಚಿನ ಬೆಳವಣಿಗೆಗಳನ್ನು ಪರಿಗಣನೆಗೆ ತೆಗೆದುಕೊಂಡು ಸಮಾಲೋಚನೆ-ಸಂಧಾನದ ಮೂಲಕ ಒಳಮೀಸಲಾತಿ ಬಗ್ಗೆ ಸ್ಪಷ್ಟವಾದ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...