HomeKarnatakaವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು

ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು

ಬಳ್ಳಾರಿ: ಮದುವೆಗೆ ಪೋಷಕರು ವಿರೋಧ ಮಾಡಿದ್ದಕ್ಕೆ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಪಟ್ಟಣದಲ್ಲಿ ನಡೆದಿದೆ.

ರಾಜು (23) ಹಾಗೂ ಪವಿತ್ರಾ (20) ಮೃತ ದುರ್ದೈವಿಗಳು. ಇಬ್ಬರೂ ಸಿರಗುಪ್ಪ ಪಟ್ಟಣದ ನಿವಾಸಿಗಳು. ರಾಜು ಹಾಗೂ ಪವಿತ್ರಾ ಪ್ರೀತಿಸುತ್ತಿದ್ದರು. ಇಬ್ಬರದ್ದೂ ಬೇರೆ ಬೇರೆ ಜಾತಿಯಾದ ಹಿನ್ನೆಲೆಯಲ್ಲಿ ಇಬ್ಬರ ಕುಟುಂಬದವರೂ ವಿವಾಹಕ್ಕೆ ಒಪ್ಪಿರಲಿಲ್ಲ. ಇದೇ ಕಾರಣಕ್ಕೆ ಇಬ್ಬರೂ ತಡರಾತ್ರಿ ಮನೆ ಬಿಟ್ಟು ಬಂದ್ದಿದ್ದರು.

ಮನೆ ಬಿಟ್ಟು ಬಂದ ಪ್ರೇಮಿಗಳು ಜಮೀನಿಗೆ ತೆರಳಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿರಗುಪ್ಪ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular