HomeKarnatakaBREAKING NEWS: ದುರ್ವೇಶ್ ಕಂಪನಿ ಬಹುಕೋಟಿ ವಂಚನೆ ಪ್ರಕರಣ: ಪ್ರಮುಖ ಆರೋಪಿ ಮನೆ ಮೇಲೆ CID...

BREAKING NEWS: ದುರ್ವೇಶ್ ಕಂಪನಿ ಬಹುಕೋಟಿ ವಂಚನೆ ಪ್ರಕರಣ: ಪ್ರಮುಖ ಆರೋಪಿ ಮನೆ ಮೇಲೆ CID ದಾಳಿ

ಹುಬ್ಬಳ್ಳಿ: ದುರ್ವೇಶ್ ಗ್ರೂಪ್ ಕಂಪನಿಯಿಂದ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮನೆ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಈಗಾಗಲೇ ಪ್ರಮುಖ ಆರೋಪಿ ಮೊಹಮ್ಮದ್ ಸುಜಾ ಸೇರಿದಂತೆ ಐವರನ್ನು ಬಂಧಿಸಿದ್ದಾರೆ. ಇದೀಗ ಪ್ರಮುಖ ಆರೋಪಿ ಮೊಹಮ್ಮದ್ ಸುಜಾ ಹುಬ್ಬಳ್ಳಿಯ ನಿವಾಸದ ಮೇಲೆ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.

ರಾಯಚೂರು ನಗರದಲ್ಲಿ ದುರ್ವೇಶ್ ಗ್ರೂಪ್ ಕಂಪನಿ ತೆರೆದಿದ್ದ ಆರೋಪಿಗಳು ಹೂಡಿಕೆ ಹೆಸರಲ್ಲಿ ಬಾಂಡ್ ಗಳನ್ನು ನೀಡಿ ವಂಚಿಸುತ್ತಿದ್ದರು. ಹೂಡಿಕೆ ಹಣಕ್ಕೆ ಹೆಚ್ಚಿನ ಬಡ್ಡಿ ನೀಡುವ ಆಮಿಷವೊಡ್ಡಿ ವಂಚಿಸುತ್ತಿದ್ದರು. ಹಣ ಕಳೆದುಕೊಂಡ ನೂರಾರು ಜನರಿಂದ ದೂರು ದಾಖಲಾಗಿತ್ತು. ಈ ಪ್ರಕರಣವನ್ನು ಸಿಐಡಿ ತನಿಖೆ ನಡೆಸುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular