ಬೆಳಗಾವಿ : ಉಕ್ಕಿ ಹರಿಯುತ್ತಿದ್ದ ಕೃಷ್ಣಾ ನದಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ
ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ.
ರಾಯಭಾಗ ತಾಲೂಕಿನ ಅಂಕಲಿ ಗ್ರಾಮದ ಭಾಬುರಾವ್ ಭಾಸ್ಕರ್ ಎಂಬುವವರು ಉಕ್ಕಿ ಹರಿಯುತ್ತಿದ್ದ ಕೃಷ್ಣಾ ನದಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ನಡೆದ ಸ್ಥಳಕ್ಕೆ ಎನ್ ಡಿ ಆರ್ ಹಾಗೂ ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ಮೃತದೇಹ ಹೊರತೆಗೆದಿದ್ದಾರೆ.