ಬೆಂಗಳೂರು : ರಾಜ್ಯದ ಅಕ್ರಮ ರೆಸಾರ್ಟ್ ಗಳ ವಿರುದ್ಧ ಕಟ್ಟು ನಿಟ್ಟಿನ ಕ್ರಮಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.
ಪಶ್ಚಿಮಘಟ್ಟದ ಎಲ್ಲ ಗಿರಿ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಿರುವ ಬಡಾವಣೆ, ತೋಟ, ಹೋಂ ಸ್ಟೇ, ರೆಸಾರ್ಟ್ಗಳ ವಿರುದ್ಧ ಕ್ರಮ ಗೊಳ್ಳಬೇಕು. ಅಲ್ಲದೇ, ಅರಣ್ಯ ಒತ್ತುವರಿಗಳನ್ನು ತಕ್ಷಣದಿಂದಲೇ ತೆರವುಗೊಳಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ತಿಂಗಳ ಒಳಗೆ ವರದಿ ಸಲ್ಲಿಸಬೇಕು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿಯವರಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.