HomeKarnatakaBIG NEWS : 2015ರ ಬಳಿಕ ಆಗಿರುವ ಎಲ್ಲಾ ಅರಣ್ಯ ಒತ್ತುವರಿಗಳನ್ನು ತೆರವುಗೊಳಿಸಿ ; ಸಚಿವ...

BIG NEWS : 2015ರ ಬಳಿಕ ಆಗಿರುವ ಎಲ್ಲಾ ಅರಣ್ಯ ಒತ್ತುವರಿಗಳನ್ನು ತೆರವುಗೊಳಿಸಿ ; ಸಚಿವ ಈಶ್ವರ ಖಂಡ್ರೆ ಖಡಕ್ ಸೂಚನೆ

ಬೆಂಗಳೂರು : 2015ರ ಬಳಿಕ ಆಗಿರುವ ಎಲ್ಲಾ ಅರಣ್ಯ ಒತ್ತುವರಿಗಳನ್ನು ತೆರವುಗೊಳಿಸಿ ಎಂದು ಅಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಖಡಕ್ ಸೂಚನೆ ನೀಡಿದ್ದಾರೆ.

ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಬೆಳಗಾವಿ, ಉತ್ತರ ಕನ್ನಡ, ಕೊಡಗು, ಹಾಸನ, ಉಡುಪಿ, ದಕ್ಷಿಣ ಕನ್ನಡ, ಜಿಲ್ಲೆಗಳೂ ಸೇರಿ ಪಶ್ಚಿಮ ಘಟ್ಟದ ಪ್ರದೇಶದಲ್ಲಿ 2015ರ ಬಳಿಕ ಆಗಿರುವ ಎಲ್ಲ ಅರಣ್ಯ ಒತ್ತುವರಿಗಳನ್ನು ತೆರವುಗೊಳಿಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

ಹಾಗೂ ಪಶ್ಚಿಮಘಟ್ಟದ ಎಲ್ಲ ಗಿರಿ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಿರುವ ಬಡಾವಣೆ, ತೋಟ, ಹೋಂ ಸ್ಟೇ, ರೆಸಾರ್ಟ್ಗಳ ವಿರುದ್ಧ ಕ್ರಮ ಗೊಳ್ಳಬೇಕು. ಅಲ್ಲದೇ, ಅರಣ್ಯ ಒತ್ತುವರಿಗಳನ್ನು ತಕ್ಷಣದಿಂದಲೇ ತೆರವುಗೊಳಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ತಿಂಗಳ ಒಳಗೆ ವರದಿ ಸಲ್ಲಿಸಬೇಕು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿಯವರಿಗೆ ಸೂಚನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular