alex Certify ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ; ಆಗಸ್ಟ್ 5ರಂದು ʼಫೋನ್-ಇನ್ʼ ಕಾರ್ಯಕ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ; ಆಗಸ್ಟ್ 5ರಂದು ʼಫೋನ್-ಇನ್ʼ ಕಾರ್ಯಕ್ರಮ

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ರಾಯಚೂರು ವಿಭಾಗದ ವತಿಯಿಂದ ಸಾರಿಗೆ ಸೌಲಭ್ಯ ಕುರಿತು ಸಾರ್ವಜನಿಕ ಪ್ರಯಾಣಿಕರ, ಶಾಲಾ-ಕಾಲೇಜು ವಿದ್ಯಾರ್ಥಿಗಳ ಸಮಸ್ಯೆಗಳನ್ನು ಪರಿಹರಿಸಲು ಹಾಗೂ ಸಾರ್ವಜನಿಕ ಪ್ರಯಾಣಿಕರಿಗೆ ಸಮರ್ಪಕ ಸಾರಿಗೆ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ರಾಯಚೂರಿನ ವಿಭಾಗೀಯ ಕಚೇರಿಯಲ್ಲಿ ಇದೇ 2024ರ ಆಗಸ್ಟ್ 05ರ ಸೋಮವಾರದಂದು ಮಧ್ಯಾಹ್ನ 3.30ರಿಂದ ಸಂಜೆ 5.30ಗಂಟೆಯವರೆಗೆ ಫೋನ್-ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಸಾರ್ವಜನಿಕ ಪ್ರಯಾಣಿಕರು, ವಿದ್ಯಾರ್ಥಿಗಳು ಬಸ್‌ನ ಸೌಲಭ್ಯ ಅಥವಾ ಕುಂದುಕೂರತೆ ಹಾಗೂ ಸಲಹೆಗಳಿದ್ದಲ್ಲಿ ದೂರವಾಣಿ ಸಂಖ್ಯೆ: 7760992352, 6366423883 ಅಥವಾ 7760992350ಗೆಸಂಪರ್ಕಿಸುವಂತೆ ಕ.ಕ.ರ.ಸಾ ನಿಗಮದ ರಾಯಚೂರು ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...