ರೈಲ್ವೆ ಇಲಾಖೆ ಪರೀಕ್ಷೆ ರದ್ದು: ಕನ್ನಡದಲ್ಲಿ ಪರೀಕ್ಷೆಗೆ ಎರಡು ದಿನದಲ್ಲಿ ಅಧಿಕೃತ ಸುತ್ತೋಲೆ

ಬೆಂಗಳೂರು: ನೈರುತ್ಯ ರೈಲ್ವೆ ಸಹಾಯಕ ಲೋಕೋ ಪೈಲಟ್ ಹುದ್ದೆಗಳ ಭರ್ತಿಗೆ ಸಾಮಾನ್ಯ ವಿಭಾಗೀಯ ಸ್ಪರ್ಧಾತ್ಮಕ ಪರೀಕ್ಷೆಯನ್ನು ಇಂಗ್ಲಿಷ್, ಹಿಂದಿ ಜೊತೆಗೆ ಕನ್ನಡದಲ್ಲಿ ಬರೆಯಲು ಅವಕಾಶ ನೀಡುವಂತೆ ನೈರುತ್ಯ ರೈಲ್ವೆ ವಲಯ ಪ್ರಧಾನ ವ್ಯವಸ್ಥಾಪಕರಿಗೆ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಸೂಚಿಸಿದ್ದಾರೆ. ಇನ್ನೆರಡು ದಿನಗಳಲ್ಲಿ ಅಧಿಕೃತ ಸುತ್ತೋಲೆ ಹೊರಡಿಸಲಾಗುವುದು ಎಂದು ಹೇಳಿದ್ದಾರೆ.

ಪರೀಕ್ಷೆಗೆ ಸುತ್ತೋಲೆ ಹೊರಡಿಸುವ ಸಂದರ್ಭದಲ್ಲಿ ಕನ್ನಡಕ್ಕೆ ಅವಕಾಶ ನೀಡಿ ನಂತರ ಹಾಲ್ ಟಿಕೆಟ್ ನಲ್ಲಿ ಹಿಂದಿ, ಇಂಗ್ಲಿಷ್ ನಲ್ಲಿ ಮಾತ್ರ ಪರೀಕ್ಷೆ ಬರೆಯುವಂತೆ ತಿಳಿಸಲಾಗಿತ್ತು. ಈ ಬಗ್ಗೆ ರೈಲ್ವೆ ನೌಕರರ ಸಂಘಟನೆಗಳು ಪರೀಕ್ಷೆ ಮುಂದೂಡುವಂತೆ ಒತ್ತಾಯಿಸಿದ್ದವು. ಜಾಲತಾಣಗಳಲ್ಲಿಯೂ ಆಕ್ರೋಶ ವ್ಯಕ್ತವಾಗಿತ್ತು. ಇದರ ಪರಿಣಾಮ ಆಗಸ್ಟ್ 3ರಂದು ಶನಿವಾರ ನಡೆಯಬೇಕಿದ್ದ ಪರೀಕ್ಷೆಯನ್ನು ನೈರುತ್ಯ ರೈಲ್ವೆ ರದ್ದುಪಡಿಸಿ ಮುಂದೂಡಿದೆ.

ವಿ. ಸೋಮಣ್ಣ ಈ ಬಗ್ಗೆ ಮಾಹಿತಿ ನೀಡಿ, ಈಗಾಗಲೇ ಪರೀಕ್ಷೆ ಮುಂದೂಡಿದ್ದು, ರಾಜ್ಯದಲ್ಲಿ ನಡೆಯುವ ಸೀಮಿತ ವಿಭಾಗೀಯ ಸ್ಪರ್ಧಾತ್ಮಕ ಪರೀಕ್ಷೆ ಸೇರಿ ಎಲ್ಲ ರೈಲ್ವೆ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read