HomeIndiaSHOCKING : ಕೋರ್ಟ್ ನಲ್ಲೇ ಅಳಿಯನನ್ನು ಗುಂಡಿಕ್ಕಿ ಕೊಂದ ಮಾಜಿ ಪೊಲೀಸ್ ಅಧಿಕಾರಿ ; ವಿಡಿಯೋ...

SHOCKING : ಕೋರ್ಟ್ ನಲ್ಲೇ ಅಳಿಯನನ್ನು ಗುಂಡಿಕ್ಕಿ ಕೊಂದ ಮಾಜಿ ಪೊಲೀಸ್ ಅಧಿಕಾರಿ ; ವಿಡಿಯೋ ವೈರಲ್

ಚಂಡೀಗಢ : ಪಂಜಾಬ್ ಪೊಲೀಸ್ ನಿವೃತ್ತ ಸಹಾಯಕ ಇನ್ಸ್ಪೆಕ್ಟರ್ ಜನರಲ್ (ಎಐಜಿ) ಮಾಲ್ವಿಂದರ್ ಸಿಂಗ್ ಸಿಧು ಅವರು ತಮ್ಮ ಅಳಿಯ ಹರ್ಪ್ರೀತ್ ಸಿಂಗ್ ಅವರನ್ನು ಗುಂಡಿಕ್ಕಿ ಕೊಂದಿರುವ ಆಘಾತಕಾರಿ ಘಟನೆ ಚಂಡೀಗಢ ಜಿಲ್ಲಾ ನ್ಯಾಯಾಲಯದಲ್ಲಿ ಶನಿವಾರ ನಡೆದಿದೆ.

ಹರ್ಪ್ರೀತ್ ಕೃಷಿ ಇಲಾಖೆಯಲ್ಲಿ ಭಾರತೀಯ ಕಂದಾಯ ಸೇವೆ (ಐಆರ್ಎಸ್) ಅಧಿಕಾರಿಯಾಗಿದ್ದರು. ಮಧ್ಯಸ್ಥಿಕೆಗಾಗಿ ನ್ಯಾಯಾಲಯಕ್ಕೆ ಬಂದಿದ್ದ ಎರಡು ಕುಟುಂಬಗಳ ನಡುವೆ ನಡೆಯುತ್ತಿರುವ ಕೌಟುಂಬಿಕ ವಿವಾದದ ಮಧ್ಯೆ ಈ ಘಟನೆ ನಡೆದಿದೆ.

ಈ ಘಟನೆಯು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಸಂತ್ರಸ್ತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಮತ್ತು ಸ್ಥಳದಲ್ಲಿದ್ದ ಜನರು ಅವನನ್ನು ಆಂಬ್ಯುಲೆನ್ಸ್ ಗೆ ಕರೆದೊಯ್ಯುತ್ತಿದ್ದಾರೆ ಎಂದು ವೀಡಿಯೊದಲ್ಲಿ ಕಾಣಬಹುದು. ಆದರೆ ಸಂತ್ರಸ್ತ ಬದುಕುಳಿಯಲಿಲ್ಲ , ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular