ವಿಶಾಖಪಟ್ಟಣಂ: ಕೊರ್ಬಾ-ವಿಶಾಖಪಟ್ಟಣಂ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ರೈಲಿನ ಬೋಗಿಗಳು ಧಗ ಧಗನೆ ಹೊತ್ತಿ ಉರಿದ ಘಟನೆ ಆಂಧ್ರಪ್ರದೇಶದ ವಿಶಖಪಟ್ಟಣಂ ರೈಲು ನಿಲ್ದಾಣದಲ್ಲಿ ನಡೆದಿದೆ.
ವಿಶಾಖಪಟ್ಟಣಂನ ರೈಲು ನಿಲ್ದಾಣಕ್ಕೆ ಆಗತಾನೇ ರೈಲು ಬಂದು ನಿಂತಿತ್ತು. ಕೆಲ ಸಮಯದಲ್ಲೇ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ರೈಲಿನ ಬಿ 6, ಬಿ7, ಬಿ8 ಬೋಗಿಗಳು ಹೊತ್ತಿ ಉರಿದಿವೆ. ಪ್ಲಾಟ್ ಫಾರಂ ಗೆ ಬಂದು ನಿಂತ ಕೆಲವೇ ಕ್ಷಣಗಳಲ್ಲಿ ಬೆಂಕಿ ಅವಘಡ ಸಂಭವಿಸಿದೆ.
ರೈಲಿನಿಂದ ಪ್ರಯಾಣಿಕರು ಇಳಿದು ಹೋಗಿದ್ದರು. ಹಾಗಾಗಿ ಭಾರಿ ಅನಾಹುತವೊಂದು ಸ್ವಲ್ಪದರಲ್ಲಿ ತಪ್ಪಿದೆ. ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ರೈಲಿನಲ್ಲಿ ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.