
ಬೆಂಗಳೂರು: ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದು, ಪತ್ನಿಯ ಎರಡು ಕಾಲುಗಳು ಕಟ್ ಆಗಿವೆ. ಬೊಮ್ಮಸಂದ್ರ ಫ್ಲೈ ಓವರ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಸಣ್ಣ ಪುಟ್ಟ ಗಾಯಗಳೊಂದಿಗೆ ಬೈಕ್ ನಲ್ಲಿದ್ದ ಮಗು ಪಾರಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಅಪಘಾತದ ಬಳಿಕ ಲಾರಿ ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.