ಬೆಂಗಳೂರು: ಅನುದಾನಿತ ಸಂಸ್ಥೆಗಳ ಬೋಧಕರ ಹುದ್ದೆ ಭರ್ತಿಗೆ ಸರ್ಕಾರ ಒಪ್ಪಿಗೆ ನೀಡಿದೆ. ಸರ್ಕಾರದ ವೇತನಾನುದಾನಕ್ಕೆ ಒಳಪಟ್ಟಿರುವ ಖಾಸಗಿ ಅನುದಾನಿತ ಪ್ರೌಢಶಾಲೆ, ಪಿಯು ಕಾಲೇಜ್, ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕರ ಹುದ್ದೆಗಳ ಭರ್ತಿಗೆ ಸರ್ಕಾರದಿಂದ ಷರತ್ತು ಒಪ್ಪಿಗೆ ನೀಡಲಾಗಿದೆ.
ಶಾಲಾ ಶಿಕ್ಷಣ ಇಲಾಖೆ ಮತ್ತು ಉನ್ನತ ಶಿಕ್ಷಣ ಇಲಾಖೆಯ ಪ್ರಸ್ತಾವನೆ ಆಧರಿಸಿ 1987ರಿಂದ 1994ರ ಅವಧಿಯಲ್ಲಿ ಪ್ರಾರಂಭವಾಗಿ ವೇತನಾನುದಾನಕ್ಕೆ ಒಳಪಟ್ಟಿರುವ ಪ್ರೌಢಶಾಲೆ, ಪಿಯು, ಪದವಿ ಕಾಲೇಜುಗಳಲ್ಲಿ 2016ರ ಜನವರಿ 1ರಿಂದ 2020ರ ಡಿಸೆಂಬರ್ 31ರವರೆಗೆ ನಿವೃತ್ತಿ, ನಿಧನ, ರಾಜೀನಾಮೆ ಸೇರಿ ಇತರೆ ಕಾರಣಗಳಿಂದ ಖಾಲಿಯಾದ ಬೋಧಕರ ಹುದ್ದೆಗಳ ಭರ್ತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ.
ಹುದ್ದೆಗಳನ್ನು ಭರ್ತಿ ಮಾಡುವಾಗ ನಿಯಮಾನಸಾರ ರೋಸ್ಟರ್ ಬಿಂದು ಮತ್ತು ಕಲ್ಯಾಣ ಕರ್ನಾಟಕ ಮೀಸಲಾತಿಯನ್ನು ಕಡ್ಡಾಯವಾಗಿ ಪಾಲಿಸಬೇಕು. 2017 ರಿಂದ 2023ರ ವರೆಗೆ ವಿದ್ಯಾರ್ಥಿಗಳ ದಾಖಲಾತಿ, ಫಲಿತಾಂಶ, ಮೂಲ ಸೌಕರ್ಯ ವ್ಯವಸ್ಥೆ ಉತ್ತಮವಾಗಿರುವ ಬಗ್ಗೆ ಖಚಿತಪಡಿಸಬೇಕು ಎಂದು ತಿಳಿಸಲಾಗಿದೆ.