ಬೆಂಗಳೂರು: ಯುಜಿ ಸಿಇಟಿಗೆ ಅರ್ಜಿ ಸಲ್ಲಿಸಿ ನೀಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ತಮ್ಮ ನೀಟ್ ರೋಲ್ ನಂಬರ್ ಅನ್ನು ದಾಖಲಿಸಲು ಆಗಸ್ಟ್ 5ರಂದು ಲಿಂಕ್ ಬಿಡುಗಡೆ ಮಾಡುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ಸೋಮವಾರ ಬೆಳಗ್ಗೆ 11 ಗಂಟೆಗೆ ಕೆಇಎ ವೆಬ್ಸೈಟ್ ನಲ್ಲಿ ಯುಜಿ ನೀಟ್ 2024 ಲಿಂಕ್ ಬಿಡುಗಡೆ ಮಾಡಲಾಗುವುದು. ಆಗಸ್ಟ್ 7ರಂದು ಬೆಳಗ್ಗೆ 11 ಗಂಟೆಗೆ ವರೆಗೆ ರೋಲ್ ನಂಬರ್ ದಾಖಲಿಸಬಹುದಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ವತಿಯಿಂದ 2024ರಲ್ಲಿ ನೀಟ್ ಪರೀಕ್ಷೆ ಬರೆದು ಅರ್ಹತೆ ಪಡೆದ ರಾಜ್ಯದ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಈ ಬಾರಿ ರಾಜ್ಯದಲ್ಲಿ 92,858 ವಿದ್ಯಾರ್ಥಿಗಳು ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸೀಟು ಪ್ರವೇಶ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅರ್ಹತೆ ಹೊಂದಿದ್ದಾರೆ.
127 ಕಟ್ ಆಫ್ ಅಂಕಗಳನ್ನು ನಿಗದಿ ಮಾಡಲಾಗಿದೆ. ವಿದ್ಯಾರ್ಥಿಗಳು ಈ ಪಟ್ಟಿ ಪರಿಶೀಲಿಸಿ ತಮ್ಮ ರ್ಯಾಂಕಿಂಗ್, ಸೀಟ್ ಲಭ್ಯತೆಯ ಮಾಹಿತಿ ಪಡೆದುಕೊಳ್ಳಬಹುದು.ನೀಟ್ ಪರೀಕ್ಷೆ ಮೂಲಕ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಅರ್ಹತೆ ಪಡೆದ ರಾಜ್ಯದ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಕೆಇಎ ವೆಬ್ಸೈಟ್ ನಲ್ಲಿ ಗಮನಿಸಬಹುದಾಗಿದೆ.