HomeKarnatakaಇಂದಿನಿಂದ ಅಕ್ರಮ ರೆಸಾರ್ಟ್, ಹೋಂ ಸ್ಟೇ ಸೇರಿ ಎಲ್ಲ ಅರಣ್ಯ ಒತ್ತುವರಿ ತೆರವು

ಇಂದಿನಿಂದ ಅಕ್ರಮ ರೆಸಾರ್ಟ್, ಹೋಂ ಸ್ಟೇ ಸೇರಿ ಎಲ್ಲ ಅರಣ್ಯ ಒತ್ತುವರಿ ತೆರವು

ಬೆಂಗಳೂರು: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಅಕ್ರಮವಾಗಿ ತಲೆ ಎತ್ತಿರುವ ರೆಸಾರ್ಟ್, ಹೋಂ ಸ್ಟೇ ಸೇರಿ ಎಲ್ಲ ಮಾದರಿ ಅರಣ್ಯ ಒತ್ತುವರಿಗಳನ್ನು ತೆರೆವುಗೊಳಿಸಲು ಪಶ್ಚಿಮಘಟ್ಟ ಅರಣ್ಯ ಒತ್ತುವರಿ ತೆರವು ಕಾರ್ಯಪಡೆ ರಚಿಸಲಾಗಿದೆ. ಸೋಮವಾರದಿಂದಲೇ ತೆರವು ಕಾರ್ಯಚರಣೆ ಆರಂಭಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಘೋಷಣೆ ಮಾಡಿದ್ದಾರೆ.

ಮೊದಲು ದೊಡ್ಡ ಪ್ರಮಾಣದಲ್ಲಿ ಅರಣ್ಯ ಒತ್ತುವರಿ ಮಾಡಿ ನಿರ್ಮಿಸಿದ ಅಕ್ರಮ ರೆಸಾರ್ಟ್, ಹೋಂ ಸ್ಟೇ ಗಳು, ನಂತರ ತೋಟ, ಕಟ್ಟಡಗಳನ್ನು ತೆರವು ಮಾಡಲು ಸೂಚಿಸಲಾಗಿದೆ. ಕಾನೂನಿನ ಮುಂದೆ ಎಲ್ಲರೂ ಸಮಾನರು. ಪಶ್ಚಿಮಘಟ್ಟ ಒತ್ತುವರಿ ಮಾಡಿ ವಾಣಿಜ್ಯ ಚಟುವಟಿಕೆ ನಡೆಸುವವರಿಗೆ ಅವಕಾಶ ನೀಡುವುದಿಲ್ಲ ಎಂದು ಸಚಿವರು ತಿಳಿಸಿದ್ದಾರೆ.

ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಕಾರ್ಯಪಡೆ ಮುಖ್ಯಸ್ಥರ ನೇತೃತ್ವದಲ್ಲಿ ಪಶ್ಚಿಮ ಘಟ್ಟ ಅರಣ್ಯ ಒತ್ತುವರಿ ತೆರವು ಕಾರ್ಯಪಡೆ ರಚಿಸಲಾಗಿದೆ. ಪಶ್ಚಿಮ ಘಟ್ಟ ಅರಣ್ಯದಲ್ಲಿ 2015ರ ನಂತರದ ಒತ್ತುವರಿಗೆ ಸಂಬಂಧಿಸಿದಂತೆ ಕರ್ನಾಟಕ ಅರಣ್ಯ ಕಾಯ್ದೆ ಶಿಕ್ಷೆ 64 ಎ ಅಡಿ ಪ್ರಕ್ರಿಯೆ ಪೂರ್ಣಗೊಂಡಿರುವ ಎಲ್ಲಾ ಪ್ರಕರಣಗಳಲ್ಲಿ ಕೂಡಲೇ ತೆರವು ಕಾರ್ಯಾಚರಣೆಗೆ ಸೂಚಿಸಲಾಗಿದೆ. ಪಶ್ಚಿಮಘಟ್ಟ ಪ್ರದೇಶದಲ್ಲಿ ಅವೈಜ್ಞಾನಿಕವಾಗಿ ಗುಡ್ಡಗಳನ್ನು ಕಡಿದು ರಸ್ತೆ ಕಾಮಗಾರಿ ಮಾಡಿ ಗುಡ್ಡ ಕುಸಿತಕ್ಕೆ ಕಾರಣವಾದ ಇಂಜಿನಿಯರ್ ಗಳು, ಗುತ್ತಿಗೆದಾರರಿಗೆ ನೋಟಿಸ್ ನೀಡಿ ಕ್ರಮ ಜರುಗಿಸಲು ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular