alex Certify ಬೆಂಗಳೂರಿನಲ್ಲಿ ಆಘಾತಕಾರಿ ಘಟನೆ: ವಾಕಿಂಗ್ ಹೋಗುತ್ತಿದ್ದ ಮಹಿಳೆಯನ್ನು ಬಲವಂತವಾಗಿ ತಬ್ಬಿ ಚುಂಬಿಸಿದ ದುಷ್ಕರ್ಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿನಲ್ಲಿ ಆಘಾತಕಾರಿ ಘಟನೆ: ವಾಕಿಂಗ್ ಹೋಗುತ್ತಿದ್ದ ಮಹಿಳೆಯನ್ನು ಬಲವಂತವಾಗಿ ತಬ್ಬಿ ಚುಂಬಿಸಿದ ದುಷ್ಕರ್ಮಿ

ಬೆಂಗಳೂರು: ಬೆಂಗಳೂರಿನಲ್ಲಿ ವಾಕಿಂಗ್ ಹೋಗುತ್ತಿದ್ದ ಮಹಿಳೆಯನ್ನು ವಿಕೃತ ಕಾಮಿಯೊಬ್ಬ ಬಲವಂತವಾಗಿ ತಬ್ಬಿಕೊಂಡು ಚುಂಬಿಸಿದ ಆಘಾತಕಾರಿ ಘಟನೆ ನಡೆದಿದೆ.

ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆಗಸ್ಟ್ 2ರಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಕೋಣನಕುಂಟೆ ಸಮೀಪದ ಕೃಷ್ಣ ನಗರದಲ್ಲಿ ವಾಕಿಂಗ್ ಹೋಗಲು ರಸ್ತೆ ಬದಿ ನಿಂತಿದ್ದ ಮಹಿಳೆಯನ್ನು ವಿಕೃತ ಕಾಮಿಯೊಬ್ಬ ಬಲವಂತವಾಗಿ ತಬ್ಬಿ ಹಿಡಿದು ಚುಂಬಿಸಿದ್ದಾನೆ.

ಮಹಿಳೆ ತಪ್ಪಿಸಿಕೊಂಡು ಓಡಿದರೂ ಹಿಂದೆಯೇ ಓಡಿ ಬಂದು ಕಿರುಕುಳ ನೀಡಿದ್ದಾನೆ. ನಂತರ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಕುರಿತು ಪೊಲೀಸರಿಗೆ ದೂರು ನೀಡಲಾಗಿದ್ದು, ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...