ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ಪ್ಯಾನ್ ಇಂಡಿಯಾ ಚಿತ್ರ ‘ಮಾರ್ಟಿನ್’ ಕಳೆದ ವರ್ಷ ತನ್ನ ಟೀಸರ್ ಮೂಲಕವೇ ಹೊಸ ದಾಖಲೆ ಬರೆದಿತ್ತು. ಇದೀಗ ಈ ಸಿನಿಮಾ ಟ್ರೈಲರ್ ಇಂದು ಯೂಟ್ಯೂಬ್ ನಲ್ಲಿ ಬಿಡುಗಡೆಯಾಗುತ್ತಿದ್ದು, ಧ್ರುವ ಸರ್ಜಾ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
ಎಪಿ ಅರ್ಜುನ್ ನಿರ್ದೇಶನದ ಈ ಚಿತ್ರದಲ್ಲಿ ಧ್ರುವ ಸರ್ಜಾ ಸೇರಿದಂತೆ ವೈಭವಿ ಶಾಂಡಿಲ್ಯ, ಅನ್ವೇಶಿ ಜೈನ್, ಜಾರ್ಜಿಯಾ ಆಂಡ್ರಿಯಾನಿ, ಚಿಕ್ಕಣ್ಣ, ಮಾಳವಿಕಾ ಅವಿನಾಶ್, ಅಚ್ಯುತ್ ಕುಮಾರ್, ನಿಕಿತಿನ್ ಧೀರ್, ನವಾಬ್ ಷಾ, ರೋಹಿತ್ ಪಾಠಕ್, ನಾಥನ್ ಜೋನ್ಸ್, ತೆರೆ ಹಂಚಿಕೊಂಡಿದ್ದು, ವಾಸವಿ ಎಂಟರ್ಪ್ರೈಸಸ್ ಬ್ಯಾನರ್ ನಲ್ಲಿ ಉದಯ್ ಕೆ ಮೆಹತಾ ಮತ್ತು ಸೂರಜ್ ಉದಯ್ ಮೆಹ್ತಾ ಬಂಡವಾಳ ಹೂಡಿದ್ದಾರೆ. ಮಣಿ ಶರ್ಮ ಸಂಗೀತ ಸಂಯೋಜನೆ ನೀಡಿದ್ದು, ಕೆ ಎಂ ಪ್ರಕಾಶ್ ಸಂಕಲನ, ಗೋಪಿನಾಥ್ ಕೃಷ್ಣಮೂರ್ತಿ ಹಾಗೂ ಎಪಿ ಅರ್ಜುನ್ ಅವರ ಸಂಭಾಷಣೆ, ಇಮ್ರಾನ್ ಸರ್ಧಾರಿಯಾ, ಮತ್ತು ಮುರಳಿ ನೃತ್ಯ ನಿರ್ದೇಶನವಿದೆ.