HomeKarnatakaಕಾಡಾನೆ ದಾಳಿ: ಚಿಕಿತ್ಸೆ ಫಲಿಸದೇ ಮಹಿಳೆ ಸಾವು

ಕಾಡಾನೆ ದಾಳಿ: ಚಿಕಿತ್ಸೆ ಫಲಿಸದೇ ಮಹಿಳೆ ಸಾವು

ಕೋಲಾರ: ಕಾಡಾನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ರಾಧಮ್ಮ ಮೃತ ಮಹಿಳೆ. ಕೋಲಾರದ ಬಂಗಾರಪೇಟೆ ತಾಲೂಕಿನ ಚತ್ತಗುಟ್ಟಹಳ್ಳಿ ಗ್ರಾಮದ ನಿವಾಸಿ ರಾಧಮ್ಮ ನಿನ್ನೆ ಕುರಿ ಮೇಯಿಸುವಾಗ ಕಾಡಾನೆ ದಾಳಿ ನಡೆಸಿತ್ತು. ಕಾಡಾನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದರು.

ಗಾಯಾಳು ರಾಧಮ್ಮ ಅವರನ್ನು ಕೋಲಾರದ ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular