alex Certify ಗಮನಿಸಿ : ಕರಾಮುವಿಯಿಂದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ಕರಾಮುವಿಯಿಂದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಆಹ್ವಾನ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ 45 ದಿನಗಳ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದ್ದು, ಆಸಕ್ತರು ನೋಂದಾಯಿಸಿಕೊಳ್ಳಬಹುದಾಗಿದೆ.

ಕೆಇಎ(ಕರ್ನಾಟಕ ಪರೀಕ್ಷಾ ಪ್ರಾಧಿಕಾರ) ಮೂಲಕ ನಡೆಸಲಿರುವ ರಾಜ್ಯ ಮಟ್ಟದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಹಾಗೂ  ರಾಷ್ಟ್ರ  ಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕರ(ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯವೇತನ ಸಂಶೋಧನಾ ಸಹಾಯಕರ (ಜೆಆರ್ಎಫ್) ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತದೆ.

ಆಸಕ್ತರು ಆ.09 ರೊಳಗಾಗಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ಕಚೇರಿಯಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಬಹುದು.ಹೆಚ್ಚಿನ ಮಾಹಿತಿಗಾಗಿ ದೂ.0821-2515944 ಗೆ ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವರಾದ ಪ್ರೊ.ಕೆ.ಬಿ.ಪ್ರವೀಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...