HomeKarnatakaಬೆಂಗಳೂರು ಸೇರಿದಂತೆ ಆಗಸ್ಟ್ 12ರವರೆಗೆ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು ಸೇರಿದಂತೆ ಆಗಸ್ಟ್ 12ರವರೆಗೆ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಕರಾವಳಿ, ಮಲೆನಾಡಿನ ಬಳಿಕ ಇದೀಗ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವರುಣಾರ್ಭಟ ಜೋರಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಆಗಸ್ಟ್ 12 ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಆಗಸ್ಟ್ 12ರವರೆಗೂ ಧಾರಾಕಾರ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳು ಸೇರಿದಂತೆ ಇತರ ಜಿಲ್ಲೆಗಳಲ್ಲಿಯೂ ಮಳೆ ಮುಂದುವರೆಯಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ವಿಜಯನಗರ, ಕಲಬುರ್ಗಿ, ಬಳ್ಳಾರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಇನ್ನು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಕೊಡಗು, ಕೋಲಾರ, ಚಾಮರಾಜನಗರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆಯಿಂದ ಬೆಂಗಳೂರಿನಲ್ಲಿ ಆರಂಭವಾಗಿರುವ ವರುಣಾರ್ಭಟಕ್ಕೆ ರಸ್ತೆಗಳು ಜಲಾವೃತವಾಗಿವೆ. ಮನೆಗಳು, ಹೋಟೆಲ್ ಗಳು, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರಗಳು ಸೃಷ್ಟಿಯಾಗಿವೆ. ಇಂದು ಮುಂಜಾನೆಯಿಂದಲೇ ನಗರದ ಕೆಲವೆಡೆ ಮಳೆಯಾಗುತ್ತಿದ್ದು, ಹಲವೆಡೆ ಟ್ರ್ಯಾಫಿಕ್ ಜಾಮ್ ಸಂಭವಿಸಿದ್ದು ವಾಹನ ಸವಾರರು ಪರದಾಡುವಂತಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular