alex Certify BREAKING : ವಿಜಯಪುರದಲ್ಲಿ ಘೋರ ಘಟನೆ ; ಶಾಲಾ ಬಸ್ ಹರಿದು 5 ವರ್ಷದ ಬಾಲಕ ಸ್ಥಳದಲ್ಲೇ ಸಾವು.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ವಿಜಯಪುರದಲ್ಲಿ ಘೋರ ಘಟನೆ ; ಶಾಲಾ ಬಸ್ ಹರಿದು 5 ವರ್ಷದ ಬಾಲಕ ಸ್ಥಳದಲ್ಲೇ ಸಾವು.!

ವಿಜಯಪುರ: ಅಂಗನವಾಡಿ ಬಾಲಕನ ಮೇಲೆ ಖಾಸಗಿ ಶಾಲಾ ಬಸ್ ಹರಿದು ಹೋದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಅರಳದಿನ್ನಿ ಗ್ರಾಮದಲ್ಲಿ ನಡೆದಿದೆ.

5 ವರ್ಷದ ಬಾಲಕನ ಮೇಲೆ ಶಾಲಾ ಬಸ್ ಹರಿದು ದುರಂತ ಸಂಭವಿಸಿದೆ. ಬಾಲಕ ಮನೆಯಿಂದ ಅಂಗನವಾಡಿಗೆ ಹೋಗುತ್ತಿದ್ದ. ಈ ವೇಳೆ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಖಾಸಗಿ ಶಾಲೆಯ ಬಸ್ ಬಾಲಕನಿಗೆ ಡಿಕ್ಕಿ ಹೊಡೆದು, ಬಾಲಕನ ಮೇಲೆಯೇ ಹರಿದು ಹೋಗಿದೆ. ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಘಟನಾ ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಶಾಲಾ ಬಸ್ ಚಾಲಕನ ಅಜಾಗರೂಕತೆಯೇ ಘಟನೆಗೆ ಕಾರಣ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...