HomeKarnatakaBIG NEWS: ಗೃಹಲಕ್ಷ್ಮೀ ಯೋಜನೆ 2 ತಿಂಗಳ ಹಣ ಇಂದಿನಿಂದಲೇ ಖಾತೆಗೆ ಜಮೆ: ಸಚಿವೆ ಲಕ್ಷ್ಮೀ...

BIG NEWS: ಗೃಹಲಕ್ಷ್ಮೀ ಯೋಜನೆ 2 ತಿಂಗಳ ಹಣ ಇಂದಿನಿಂದಲೇ ಖಾತೆಗೆ ಜಮೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ

ಮಂಡ್ಯ: ಗೃಹಲಕ್ಷ್ಮೀ ಯೋಜನೆಯ ಎರಡು ತಿಂಗಳ ಹಣ ಕೆಲ ಫಲಾನುಭವಿಗಳ ಖಾತೆಗೆ ಜಮೆಯಾಗಿಲ್ಲ ಎಂಬ ಆರೋಪಗಳು ಕೇಳಿಬಂದಿದ್ದವು. ಇದೀಗ ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಳ್ಕರ್ ಸ್ಪಷ್ಟನೆ ನೀಡಿದ್ದಾರೆ.

ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಜನಾಂದೋಲನ ಸಭೆಯಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಕೆಲ ಫಲಾನುಭವಿಗಳಿಗೆ ಗೃಹಲಕ್ಷ್ಮೀ ಯೋಜನೆ ಹಣ ಎರಡು ತಿಂಗಳಿಂದ ಬಂದಿಲ್ಲ ಎಂದು ದೂರು ಬಂದಿದೆ. ತಾಂತ್ರಿಕ ದೋಷದಿಂದಾಗಿ ಕೆಲವರ ಖಾತೆಗೆ ಹಣ ಜಮೆಯಾಗಲು ವಿಳಂಬವಾಗಿದೆ. ಆದರೆ ಇಂದಿನಿಂದ ಎಲ್ಲ ಫಲಾನುಭವಿಗಳ ಖಾತೆಗೂ ಹಣ ಜಮೆಯಾಗಲಿದೆ ಎಂದರು.

ಜೂನ್ ಹಾಗೂ ಜುಲೈ ಎರಡೂ ತಿಂಗಳ ಗೃಹಲಕ್ಷ್ಮೀ ಯೋಜನೆ ಹಣ ಒಟ್ಟಿಗೆ ಇಂದಿನಿಂದ ಫಲಾನುಭವಿಗಳ ಖಾತೆಗೆ ಜಮೆಯಾಗಲಿದೆ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular