HomeKarnatakaBIG UPDATE : ಯಜಮಾನಿಯರಿಗೆ ಗುಡ್ ನ್ಯೂಸ್ ; ಇಂದಿನಿಂದಲೇ ಜೂನ್, ಜುಲೈ ತಿಂಗಳ 'ಗೃಹಲಕ್ಷ್ಮಿ'...

BIG UPDATE : ಯಜಮಾನಿಯರಿಗೆ ಗುಡ್ ನ್ಯೂಸ್ ; ಇಂದಿನಿಂದಲೇ ಜೂನ್, ಜುಲೈ ತಿಂಗಳ ‘ಗೃಹಲಕ್ಷ್ಮಿ’ ಹಣ ಜಮಾ

ಬೆಂಗಳೂರು : ಯಜಮಾನಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಇಂದಿನಿಂದ ಎಲ್ಲ ಫಲಾನುಭವಿಗಳ ಖಾತೆಗೂ ಹಣ ಜಮೆಯಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಜನಾಂದೋಲನ ಸಭೆಯಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಾಂತ್ರಿಕ ದೋಷದಿಂದ ಕಳೆದ 2 ತಿಂಗಳಿಂದ ಹಣ ಬಂದಿಲ್ಲ ಎಂದು ನಮಗೆ ಕೆಲವರು ದೂರು ನೀಡಿದ್ದಾರೆ. ತಾಂತ್ರಿಕ ಸಮಸ್ಯೆಯಿಂದ ಕೆಲವರ ಖಾತೆಗೆ ಹಣ ಜಮೆಯಾಗಿಲ್ಲ. ಇಂದಿನಿಂದ ಎಲ್ಲ ಫಲಾನುಭವಿಗಳ ಖಾತೆಗೂ ಹಣ ಜಮೆಯಾಗಲಿದೆ, ಮಹಿಳೆಯರು ಚಿಂತಿಸುವ ಅಗತ್ಯವಿಲ್ಲ ಎಂದರು.

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ 2000 ಹಣ ನೀಡಲಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಯು ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವ ಯೋಜನೆಯಾಗಿದೆ. ಜೂನ್ ಮತ್ತು ಜುಲೈತಿಂಗಳ 2 ತಿಂಗಳ ಕಂತಿನ ಹಣವನ್ನು ಒಟ್ಟಿಗೆ ಇದೇ ಆಗಸ್ಟ್ ಮೊದಲ ವಾರದಲ್ಲಿ ಯಜಮಾನಿಯರ ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಲವು ತಾಂತ್ರಿಕ ತೊಂದರೆಯಿಂದ ಸರ್ಕಾರ ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಜಮಾ ಮಾಡಿರಲಿಲ್ಲ. ಇದೀಗ ಸರ್ಕಾರ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸಿದ್ದು, ಆಗಸ್ಟ್ ಮೊದಲ ವಾರದಲ್ಲಿ ಜೂನ್ ಹಾಗೂ ಜುಲೈ ತಿಂಗಳ ಗೃಹಲಕ್ಷ್ಮಿ ಹಣ ಜಮಾ ಆಗಲಿದೆ . ಇನ್ಮುಂದೆ ಪ್ರತಿ ತಿಂಗಳು 15 ರೊಳಗೆ ಗೃಹಲಕ್ಷ್ಮಿ ಹಣ ಜಮಾ ಆಗಲಿದೆ ,ಚಿಂತೆ ಬೇಡ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇತ್ತೀಚೆಗೆ ಹೇಳಿದ್ದರು. ಪ್ರತಿ ತಿಂಗಳ 15 ನೇ ತಾರೀಖಿನ ಒಳಗಾಗಿ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ ಆಗಲಿದೆ. ಈ ಬಗ್ಗೆ ಯಾರೂ ಚಿಂತೆ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದರು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular